Monday, July 7, 2025
spot_imgspot_img
spot_imgspot_img

ಹೋಟೆಲ್, ರೆಸಾರ್ಟ್ ವಿದ್ಯುತ್ ಬಿಲ್ ಮನ್ನಾ, ಶೇ.50ರಷ್ಟು ತೆರಿಗೆ ವಿನಾಯಿತಿ; ಪ್ರವಾಸೋದ್ಯಮ ಕ್ಷೇತ್ರಕ್ಕೆ ಪರಿಹಾರ ಪ್ಯಾಕೇಜ್ ಹೊರಡಿಸಿದ ರಾಜ್ಯ ಸರ್ಕಾರ

- Advertisement -
- Advertisement -

ಬೆಂಗಳೂರು: ಕೋವಿಡ್ ಎರಡನೇ ಅಲೆಯಿಂದಾಗಿ ತೀವ್ರ ಕಷ್ಟ ಅನುಭವಿಸುತ್ತಿರುವ ಪ್ರವಾಸೋದ್ಯಮ ಕ್ಷೇತ್ರಕ್ಕೆ ರಾಜ್ಯ ಸರ್ಕಾರವು ಪರಿಹಾರ ಪ್ಯಾಕೇಜ್ ಹೊರಡಿಸಿದೆ. ಪ್ರವಾಸೋದ್ಯಮ ವಲಯಗಳಲ್ಲಿರುವ ಹೋಟೆಲ್, ರೆಸಾರ್ಟ್, ರೆಸ್ಟೋರೆಂಟ್ ಮತ್ತು ಮನರಂಜನಾ ಪಾರ್ಕ್‍ಗಳಿಗೆ ಆಸ್ತಿ ತೆರಿಗೆ, ವಿದ್ಯುತ್ ಶುಲ್ಕ ಹಾಗೂ ಅಬಕಾರಿ ಶುಲ್ಕದಲ್ಲಿ ಹಲವಾರು ರಿಯಾಯಿತಿಗಳ ಬಗ್ಗೆ ಆದೇಶ ಹೊರಡಿಸಿದೆ.

ಹೋಟೆಲ್, ರೆಸಾರ್ಟ್, ರೆಸ್ಟೋರೆಂಟ್ ಮತ್ತು ಮನರಂಜನಾ ಪಾರ್ಕ್‍ಗಳಿಗೆ ಪ್ರಸಕ್ತ ಸಾಲಿನಲ್ಲಿ ಶೇ. 50ರಷ್ಟುಆಸ್ತಿ ತೆರಿಗೆ ಶುಲ್ಕ ವಿನಾಯಿತಿ ಮತ್ತು ಏಪ್ರಿಲ್, ಮೇ ಹಾಗೂ ಜೂನ್ ತಿಂಗಳ ವಿದ್ಯುತ್ ಶುಲ್ಕ ಮನ್ನಾ ಮಾಡಲಾಗಿದೆ ಎಂದು ಪ್ರವಾಸೋದ್ಯಮ ಸಚಿವ ಸಿಪಿ ಯೋಗೇಶ್ವರ್ ತಿಳಿಸಿದ್ದಾರೆ.

ಅಬಕಾರಿ ಸನ್ನದು ಶುಲ್ಕ ಮತ್ತು ಹೆಚ್ಚುವರಿ ಸನ್ನದು ಶುಲ್ಕಗಳಲ್ಲಿ ಶೇ. 50ರಷ್ಟು ಮೊತ್ತವನ್ನು ಪಾವತಿಸುವುದು ಮತ್ತು ಉಳಿದ ಶೇ.50ರಷ್ಟು ಮೊತ್ತವನ್ನು ಈ ವರ್ಷದ ಡಿ.31 ರೊಳಗೆ ಪಾವತಿಸಲು ಆರು ತಿಂಗಳ ಕಾಲಾವಕಾಶ ನೀಡಲಾಗಿದೆ.

ಪ್ರವಾಸೋದ್ಯಮ ಇಲಾಖೆಯಲ್ಲಿ ನೋಂದಣಿ ಮಾಡಿಕೊಂಡಿರುವ ಪ್ರತಿ ಪ್ರವಾಸಿ ಮಾರ್ಗದರ್ಶಿಗೆ ಐದು ಸಾವಿರ ರೂ. ಪರಿಹಾರವನ್ನು ನೇರವಾಗಿ ಅವರ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

- Advertisement -

Related news

error: Content is protected !!