Wednesday, May 15, 2024
spot_imgspot_img
spot_imgspot_img

ಹಾಸನಾಂಬೆ ದರ್ಶನದ ವೇಳೆ ಕರೆಂಟ್‌ ಶಾಕ್‌ – ನೂಕುನುಗ್ಗಲು

- Advertisement -G L Acharya panikkar
- Advertisement -

ಹಾಸನ: ಕರೆಂಟ್ ಶಾಕ್‌ನಿಂದ ದಿಢೀರ್ ನೂಕು ನುಗ್ಗಲು ಸೃಷ್ಟಿಯಾದ ಘಟನೆ ಹಾಸನಾಂಬೆ ದೇವಸ್ಥಾನದಲ್ಲಿ ನಡೆದಿದೆ.

ವರ್ಷಕ್ಕೆ ಒಂದು ಬಾರಿ ತೆರೆಯಲ್ಪಡುವ ಹಾಸನಾಂಬೆ ದೇವಾಲಯದ ಬಾಗಿಲು ನವೆಂಬರ್‌ 2 ರಿಂದ ತೆರೆದಿದ್ದು ಇಂದು ಬೆಳಗ್ಗೆಯಿಂದಲೂ ಸಾವಿರಾರು ಸಂಖ್ಯೆಯ ಭಕ್ತರು ದೇವಿಯ ದರ್ಶನಕ್ಕೆ ಆಗಮಿಸಿದ್ದರು.

ಮಧ್ಯಾಹ್ನ 12.30ರ ವೇಳೆ ಉಚಿತ ದರ್ಶನದ ಸಾಲಿ ಹಾಕಿದ್ದ ಬ್ಯಾರಿಕೇಡ್‌ನಲ್ಲಿ ವಿದ್ಯುತ್‌ ಪ್ರವಹಿಸಿದೆ. ಬ್ಯಾರಿಕೇಡ್‌ ವಿದ್ಯುತ್‌ ಪ್ರವಹಿಸಿದ್ದನ್ನು ಕಂಡು ಸಾಲಿನಲ್ಲಿದ್ದ ಭಕ್ತರು ಜೀವ ಉಳಿಸಿಕೊಳ್ಳಲು ಸ್ಥಳದಿಂದ ಓಡಿದ್ದಾರೆ. ಈ ವೇಳೆ ಒಬ್ಬರ ಮೇಲೆ ಒಬ್ಬರು ಬಿದ್ದಿದ್ದು, 17 ಮಂದಿ ಗಾಯಗೊಂಡಿದ್ದಾರೆ.ಕೂಡಲೇ ಎಲ್ಲರನ್ನೂ ಹಾಸನ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಯಿತು. ಈ ಪೈಕಿ ಐದು ಮಂದಿ ಪ್ರಥಮ ಚಿಕಿತ್ಸೆ ಪಡೆದು ಮನೆಗೆ ಮರಳಿದ್ದಾರೆ. ಉಳಿದವರಿಗೆ ಹಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.

ಕೂಡಲೇ ಅಲ್ಲಿದ್ದ ಸ್ವಯಂಸ್ವೇವಕರು ಮತ್ತು ಸ್ಥಳೀಯರು ಕೆಲವರನ್ನು ಹೊರಗೆಳೆದು ಆಸ್ಪತ್ರೆಗೆ ದಾಖಲಿಸಿದ್ದಾರೆ. 20 ಮಂದಿಗೆ ಕರೆಂಟ್‌ ಶಾಕ್‌ ಹೊಡೆದಿದ್ದು, ಓರ್ವ ಬಾಲಕಿ ಗಂಭೀರವಾಗಿ ಗಾಯಗೊಂಡಿದ್ದಾಳೆ ಎಂಬ ಮಾಹಿತಿ ಲಭ್ಯವಾಗಿದೆ.

- Advertisement -

Related news

error: Content is protected !!