Sunday, July 26, 2026
spot_imgspot_img
spot_imgspot_img

ಉಪಚುನಾವಣೆ ಫಲಿತಾಂಶ 2028ರಲ್ಲಿ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರ ಹಿಡಿಯುವ ಮುನ್ಸೂಚನೆ: ದ.ಕ. ಜಿಲ್ಲಾ ಯುವ ಕಾಂಗ್ರೆಸ್‌ ಅಧ್ಯಕ್ಷ ಇಬ್ರಾಹಿಂ ನವಾಝ್

- Advertisement -
- Advertisement -

ಮಂಗಳೂರು: ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆಯ ಉಪಚುನಾವಣೆಯ ಗೆಲುವು ಕೇವಲ ಎರಡು ಕ್ಷೇತ್ರಗಳ ಜಯವಲ್ಲ, ಇದು 2028ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಮತ್ತೆ ರಾಜ್ಯದಲ್ಲಿ ಅಧಿಕಾರಕ್ಕೆ ಬರುವ ಮುನ್ಸೂಚನೆ ಎಂದು ದ.ಕ. ಜಿಲ್ಲಾ ಯುವ ಕಾಂಗ್ರೆಸ್‌ ಅಧ್ಯಕ್ಷ ಇಬ್ರಾಹಿಂ ನವಾಝ್ ಬಣ್ಣಿಸಿದ್ದಾರೆ. ಇದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ನೇತೃತ್ವದ ರಾಜ್ಯ ಸರ್ಕಾರದ ಜನಪರ ಯೋಜನೆಗಳು ಮತ್ತು ಅಭಿವೃದ್ಧಿ ಕಾರ್ಯಗಳಿಗೆ ಜನರು ನೀಡಿರುವ ಆಶೀರ್ವಾದ. ಈ ಫಲಿತಾಂಶವು ವಿರೋಧ ಪಕ್ಷಗಳ ಅಪಪ್ರಚಾರಕ್ಕೆ ಜನತೆ ನೀಡಿದ ತಕ್ಕ ಉತ್ತರ ಎಂದು ಅವರು ಹೇಳಿದ್ದಾರೆ.

ಮುಂಬರುವ ದಿನಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯುವ ಕಾಂಗ್ರೆಸ್ ರಾಜ್ಯದ ಪ್ರತೀ ಹಳ್ಳಿಹಳ್ಳಿಗಳಲ್ಲಿ ಕಾಂಗ್ರೆಸ್‌ ಸರ್ಕಾರದ ಜನಪರ ಆಡಳಿತ, ರಾಜ್ಯದ ಅಭಿವೃದ್ಧಿಗಳನ್ನು ಮುಂದಿಟ್ಟು ಆಮೂಲಕ ಪಕ್ಷವನ್ನು ಬಲಪಡಿಸಲು ವಿಶೇಷ ಅಭಿಯಾನ ಕೈಗೊಳ್ಳಲಿದೆ. ಯುವಕರಲ್ಲಿ ಸರ್ಕಾರದ ಜನಪರ ಯೋಜನೆಗಳ ಬಗ್ಗೆ ಜಾಗೃತಿ ಮೂಡಿಸಲಾಗುವುದು ಎಂದು ಎಂದ ಅವರು, 2028ರ ವಿಧಾನಸಭಾ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಕಾಂಗ್ರೆಸ್ ಭರ್ಜರಿ ಸಾಧನೆ ಮಾಡುವಂತೆ ಮಾಡುವುದು ನಮ್ಮ ಯುವ ತಂಡದ ಗುರಿ ಎಂದು ದ.ಕ. ಜಿಲ್ಲಾ ಯುವ ಕಾಂಗ್ರೆಸ್‌ ಅಧ್ಯಕ್ಷ ಇಬ್ರಾಹಿಂ ನವಾಝ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

Related news

error: Content is protected !!