Tuesday, July 1, 2025
spot_imgspot_img
spot_imgspot_img

ಸೈಬ‌ರ್ ಹಾಗೂ ಇನ್ನಿತರ ಅಪರಾಧ ತಡೆಗೆ ಪೊಲೀಸ್‌ ಇಲಾಖೆಯಿಂದ ನೂತನ ತಂತ್ರಜ್ಞಾನ ಬಳಕೆ

- Advertisement -
- Advertisement -

ಸೈಬ‌ರ್ ಹಾಗೂ ಇನ್ನಿತರ ಅಪರಾಧಗಳನ್ನು ತಡೆಗಟ್ಟಲು ಪೊಲೀಸ್ ಇಲಾಖೆ ನೂತನ ತಂತ್ರಜ್ಞಾನ ಬಳಸುತ್ತಿದೆ ಎಂದು ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದ್ದಾರೆ.ಉತ್ತರಕನ್ನಡ ಜಿಲ್ಲೆಯ ಕಾರವಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗ ಅಪರಾಧಗಳ ಸ್ವರೂಪ ಬದಲಾಗಿದೆ. ದೇಶ ಅಥವಾ ವಿದೇಶದ ಯಾವುದೇ ಮೂಲೆಯಲ್ಲಿ ಕುಳಿತು ಮೋಸ ಮಾಡಬಹುದು. ಸೈಬರ್ ಮೂಲಕ ಅನೇಕ ರೀತಿಯ ವಂಚನೆಗಳು ನಡೆಯುತ್ತಿವೆ. ಈ ಹಿನ್ನೆಲೆಯಲ್ಲಿ ಪೊಲೀಸ್ ಸಿಬ್ಬಂದಿಯ ತರಬೇತಿ ವಿಷಯಕ್ಕೆ ಸಂಬಂಧಿಸಿದಂತೆ ಸಾಕಷ್ಟು ಬದಲಾವಣೆ ಮಾಡಲಾಗಿದೆ.

ತಂತ್ರಜ್ಞಾನಗಳ ಬಗ್ಗೆಯೂ ತರಬೇತಿ ನೀಡಲಾಗುತ್ತಿದೆ. ಎಂದರು. ವಂಚಕರು ಅಪರಾಧ ಮಾಡುವ ವಿಧಾನಗಳನ್ನು ಬದಲಾವಣೆ ಮಾಡಿಕೊಳ್ಳುತ್ತಾ ಹೊಸ ಮಾರ್ಗಗಳನ್ನು ಹುಡುಕಿಕೊಳ್ಳುತ್ತಿದ್ದಾರೆ. ಪೊಲೀಸ್ ಇಲಾಖೆಯ ಕಚೇರಿಯ ಸಂಖ್ಯೆಯಿಂದಲೇ ವಿಪಿಎನ್ ತಂತ್ರಜ್ಞಾನ ಬಳಕೆ ಮಾಡಿ ಕರೆ ಮಾಡಿ ವಂಚನೆ ಮಾಡುತ್ತಿರುವ ಪ್ರಕರಣಗಳು ಕಂಡು ಬರುತ್ತಿವೆ. ಜನರು ಜಾಗೃತರಾಗಬೇಕು. ಹೊಸ ತಂತ್ರಜ್ಞಾನಗಳನ್ನು ವಂಚಕರು ಹೆಚ್ಚಿನ ಪ್ರಮಾಣದಲ್ಲಿ ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಎಡಿಜಿಪಿ ತಿಳಿಸಿದರು.

- Advertisement -

Related news

error: Content is protected !!