Sunday, June 14, 2026
spot_imgspot_img
spot_imgspot_img

ಲೋಕಾಯುಕ್ತ ಬಲೆಗೆ ಬಿದ್ದ ಸೈಬರ್ ಕ್ರೈಂ ಠಾಣೆ ಹೆಡ್ ಕಾನ್‌ಸ್ಟೇಬಲ್‌

- Advertisement -
- Advertisement -

ಬೆಂಗಳೂರು: ಲಂಚ ಸ್ವೀಕರಿಸುವಾಗ ಸೈಬರ್‌ ಠಾಣೆ ಹೆಡ್‌ ಕಾನ್‌ಸ್ಟೇಬಲ್‌ವೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಹೆಡ್‌ ಕಾನ್‌ಸ್ಟೇಬಲ್ ಎಂ.ಲೋಕೇಶ್‌ ಎಂಬವರು ವ್ಯಕ್ತಿಯೊಬ್ಬರಿಂದ 25,000 ರೂ. ಲಂಚ ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳಿಗೆ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿದ್ದಾರೆ. ರಮೇಶ್ ಎಂಬಾತನ ವಿರುದ್ಧ ಅತ್ತಿಬೆಲೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ರಮೇಶ್ ತಾಯಿ ರೂಪಾ ಎಂಬವರ ಬಳಿ ಹೆಡ್‌ ಕಾನ್‌ಸ್ಟೇಬಲ್‌ ಲೋಕೇಶ್‌ ಲಂಚಕ್ಕೆ ಬೇಡಿಕೆಯಿಟ್ಟಿದ್ದರು. ಲೋಕೇಶ್ ವಿರುದ್ಧ ಆರೋಪಿ ರಮೇಶ್ ತಾಯಿ ಲೋಕಾಯುಕ್ತ ಅಧಿಕಾರಿಗಳಿಗೆ ದೂರು ನೀಡಿದ್ದು. ಬೆಂಗಳೂರು ಗ್ರಾಮಾಂತರ ಲೋಕಾಯುಕ್ತ ಡಿವೈಎಸ್ಪಿ ಗಿರೀಶ್ ಆನಂದ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ, ಲೋಕೇಶ್‌ರನ್ನು ಬಂಧಿಸಲಾಗಿದೆ.

- Advertisement -

Related news

error: Content is protected !!