


ಮಂಗಳೂರು: ಸಂಚಾರ ನಿಯಮ ಉಲ್ಲಂಘನೆಯ ಇ-ಚಲನ್ ದಂಡ ಪಾವತಿಸುವಂತೆ ನಂಬಿಸಿ ಸಾರ್ವಜನಿಕರಿಗೆ ವಂಚಿಸುತ್ತಿರುವ ಸೈಬರ್ ಖದೀಮರ ಬಗ್ಗೆ ಮಂಗಳೂರು ನಗರ ಪೊಲೀಸ್ ಆಯುಕ್ತರು ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದಾರೆ.
ಸಾರ್ವಜನಿಕರ ಮೊಬೈಲ್ಗೆ SMS/Whatsapp ಮೂಲಕ ನಕಲಿ ಲಿಂಕ್ ಹಾಗೂ APK ಫೈಲ್ಗಳನ್ನು ಕಳುಹಿಸಿ ಹಣ ದೋಚುವ ಪ್ರಕರಣಗಳು ಹೆಚ್ಚಾಗುತ್ತಿವೆ. 2026ರಲ್ಲಿ ಈವರೆಗೆ ಮಂಗಳೂರು ನಗರದ ವಿವಿಧ ಠಾಣೆಗಳಲ್ಲಿ ಒಟ್ಟು 8 ಪ್ರಕರಣ ದಾಖಲಾಗಿದ್ದು, ಸಾರ್ವಜನಿಕರು ಸುಮಾರು 44 ಲಕ್ಷ ರೂ. ಕಳೆದುಕೊಂಡಿದ್ದಾರೆ ಆದ್ದರಿಂದ, ಸಾರ್ವಜನಿಕರು ಇಂತಹ ವಂಚನೆಗಳ ಬಗ್ಗೆ ಹೆಚ್ಚಿನ ಜಾಗರೂಕತೆ ವಹಿಸಬೇಕು. ತಮ್ಮ ವಾಹನದ ಮೇಲೆ ಸಂಚಾರ ನಿಯಮ ಉಲ್ಲಂಘನೆ ಪ್ರಕರಣ ದಾಖಲಾಗಿದೆಯೇ ಎಂಬುದನ್ನು ಅಧಿಕೃತ ಇ-ಚಲನ್ ವೆಬ್ಸೈಟ್ನಲ್ಲಿ ಅಥವಾ ಖುದ್ದಾಗಿ ಹತ್ತಿರದ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪರಿಶೀಲಿಸಿದ ನಂತರವೇ ದಂಡದ ಮೊತ್ತವನ್ನು ಪಾವತಿಸಬೇಕು ಎಂದು ಪೊಲೀಸರು ತಿಳಿಸಿದ್ದಾರೆ.
ಸೈಬರ್ ವಂಚನೆಯಿಂದ ಸುರಕ್ಷಿತವಾಗಿರಲು ಸಾರ್ವಜನಿಕರು ಈ ಕೆಳಕಂಡ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸುವಂತೆ ಕೋರಲಾಗಿದೆ.
DO's (ಮಾಡಬೇಕಾದ ಕ್ರಮಗಳು)
- *ತಮ್ಮ ವಾಹನದ ಮೇಲೆ ಸಂಚಾರ ನಿಯಮ ಉಲ್ಲಂಘನೆಗೆ ಸಂಬAಧಿಸಿದ ಇ-ಚಲನ್ ಬಾಕಿ ಇದೆಯೇ ಎಂಬುದನ್ನು ಸರ್ಕಾರದ ಅಧಿಕೃತ ವೆಬ್ಸೈಟ್ https://echallan.parivahan.nic.in ನಲ್ಲಿ ಮಾತ್ರ ಪರಿಶೀಲಿಸಿ, ಅಲ್ಲಿಯೇ ದಂಡದ ಮೊತ್ತವನ್ನು ಪಾವತಿಸುವುದು.
- *ಇ-ಚಲನ್ ಸಂದೇಶದ ಬಗ್ಗೆ ಯಾವುದೇ ಸಂಶಯವಿದ್ದಲ್ಲಿ, ಮಂಗಳೂರು ನಗರದ ಹತ್ತಿರದ ಸಂಚಾರ ಪೊಲೀಸ್ ಠಾಣೆಗೆ /ಸಂಚಾರ ಪೊಲೀಸ್ ಅಧಿಕಾರಿಗಳನ್ನು ಭೇಟಿ ನೀಡಿ ಖಚಿತಪಡಿಸಿಕೊಳ್ಳುವುದು.
- *ಈ-ಚಾಲನ್ ನೋಟಿಸು ಪೋಸ್ಟ್ ಮೂಲಕ ಸ್ವೀಕೃತವಾಗಿದ್ದರೆ, ಅದರ ದಂಡವನ್ನು Mangaloreone / Karnatakaone ನ ಅಧಿಕೃತ ವೆಬ್ ಸೈಟ್ /ಅಪ್ ಮೂಲಕ ಪಾವತಿಸುವುದು.
DON'Ts (ಮಾಡಬಾರದ ಕ್ರಮಗಳು)
- *ಮೊಬೈಲ್ ಫೋನ್ಗೆ ಬರುವ ಯಾವುದೇ APK ಫೈಲ್ಗಳನ್ನು ಯಾವುದೇ ಕಾರಣಕ್ಕೂ ಡೌನ್ಲೋಡ್ ಮಾಡಬಾರದು ಅಥವಾ ಇಸ್ಟಾಲ್ ಮಾಡಬಾರದು.
- *ಅಪರಿಚಿತ ವ್ಯಕ್ತಿಗಳಿಂದ ಬರುವ ಲಿಂಕ್ಗಳನ್ನು ಕ್ಲಿಕ್ ಮಾಡಬಾರದು.
- *ಇ-ಚಲನ್ ದಂಡ ಪಾವತಿಸುವಂತೆ ಬರುವ ಅಪರಿಚಿತ ಲಿಂಕ್ಗಳ ಮೂಲಕ ಬ್ಯಾಂಕ್ ಖಾತೆಯ ವಿವರಗಳು, ATM ಕಾರ್ಡ್ ವಿವರಗಳು, OTP ಅಥವಾ ಇತರ ವೈಯಕ್ತಿಕ ಮಾಹಿತಿಗಳನ್ನು ಹಂಚಿಕೊಳ್ಳಬಾರದು.
- *ಅಧಿಕೃತ ವೆಬ್ಸೈಟ್ಗಳಂತೆ ಕಾಣುವ ನಕಲಿ ವೆಬ್ಸೈಟ್ಗಳ ಬಗ್ಗೆ ಎಚ್ಚರಿಕೆ ವಹಿಸಬೇಕು. ಕೇವಲ https:// ಇರುವುದರಿಂದಲೇ ವೆಬ್ಸೈಟ್ ಅಧಿಕೃತವೆಂದು ಪರಿಗಣಿಸಬಾರದು.
ಸಾರ್ವಜನಿಕರು ಮೇಲ್ಕಂಡ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸುವ ಮೂಲಕ ಸೈಬರ್ ವಂಚನೆಗೆ ಒಳಗಾಗುವುದನ್ನು ತಪ್ಪಿಸಿಕೊಳ್ಳುವುದು. ತಮ್ಮ ಮೊಬೈಲ್ ಫೋನ್ಗೆ ಬರುವ ಇ-ಚಲನ್ ದಂಡ ಪಾವತಿ ಸಂದೇಶದ ಬಗ್ಗೆ ಯಾವುದೇ ಸಂಶಯವಿದ್ದಲ್ಲಿ 0824-2220823 ಸಂಖ್ಯೆಗೆ ಕರೆ ಮಾಡಿ ಖಚಿತಪಡಿಸಿಕೊಳ್ಳಬಹುದು ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ








