Sunday, May 19, 2024
spot_imgspot_img
spot_imgspot_img

ಅರಬ್ಬಿ ಸಮುದ್ರದಲ್ಲಿ ಬಿಪರ್‌ಜಾಯ್‌ ಚಂಡಮಾರುತ; ಕರಾವಳಿಯಲ್ಲಿ ಭಾರೀ ಗಾಳಿ-ಮಳೆ ಸಾಧ್ಯತೆ

- Advertisement -G L Acharya panikkar
- Advertisement -

ಮಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಅದು ಚಂಡಮಾರುತವಾಗಿ ಪರಿವರ್ತನೆಯಾಗುವ ಸಾಧ್ಯತೆ ಇದ್ದು, ಈ ಚಂಡಮಾರುತಕ್ಕೆ ಬಿಪರ್​ಜಾಯ್ ಎಂದು ಹೆಸರಿಡಲಾಗಿದೆ. ಕರ್ನಾಟಕದ ಕರಾವಳಿ ಭಾಗದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಭಾರೀ ಗಾಳಿ ಮಳೆ ಸುರಿಯಲಿದ್ದು,ಸಮುದ್ರ ಪ್ರಕ್ಷುಬ್ಧವಾಗಿರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮುನ್ನೆಚ್ಚರಿಕಾ ಕ್ರಮವಾಗಿ ಉಡುಪಿ ಜಿಲ್ಲಾಧಿಕಾರಿ ಕೂರ್ಮ ರಾವ್‌ ಮೀನುಗಾರರು ಸಮುದ್ರಕ್ಕಿಳಿಯದಂತೆ ಸೂಚನೆ ನೀಡಿ ಪ್ರಕಟಣೆ ಹೊರಡಿಸಿದ್ದಾರೆ. ಪ್ರವಾಸಿಗರು, ಸ್ಥಳೀಯರು, ಸಮುದ್ರ, ನದಿ ತೀರಕ್ಕೆ ತೆರಳದಂತೆ ಸೂಚನೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತದಿಂದ ಮುಂಜಾಗೃತಾ ಕ್ರಮವಾಗಿ ಸಾರ್ವಜನಿಕರಿಗೆ ಈ ಕೆಳಕಂಡಂತೆ ಸೂಚನೆಗಳನ್ನು ನೀಡಲಾಗಿದೆ.

ಈ ಸಂದರ್ಭದಲ್ಲಿ ಮಕ್ಕಳು/ ಸಾರ್ವಜನಿಕರು ಸಮುದ್ರ ತೀರ, ಅಪಾಯಕಾರಿ ವಿದ್ಯುತ್ ಕಂಬ/ ಕಟ್ಟಡ, ಮರಗಳ ಹತ್ತಿರ ಅಥವಾ ಕೆಳಗೆ ನಿಲ್ಲಬಾರದು. ಅಲ್ಲದೆ ನೆರೆ ಪೀಡಿತ ತಗ್ಗು ಪ್ರದೇಶದಲ್ಲಿ ವಾಸಿಸುವ ಸಾರ್ವಜನಿಕರು ಸುರಕ್ಷಿತ ಸ್ಥಳಗಳನ್ನು ಸೇರಬೇಕು ಎಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ.

- Advertisement -

Related news

error: Content is protected !!