Saturday, June 28, 2025
spot_imgspot_img
spot_imgspot_img

ತಮಿಳುನಾಡಿನಲ್ಲಿ ಫೆಂಗಲ್ ಚಂಡಮಾರುತ; ಭೂಕುಸಿತದಿಂದ ಮೂವರ ದುರ್ಮರಣ

- Advertisement -
- Advertisement -

ಚೆನ್ನೈ: ಫೆಂಗಲ್ ಚಂಡಮಾರುತದ ಅಬ್ಬರಕ್ಕೆ ಭೂಕುಸಿತ ಉಂಟಾಗಿ ಮೂವರು ಸಾವನ್ನಪ್ಪಿದ್ದಾರೆ. ಮುಂದಿನ 48 ಗಂಟೆಗಳ ಕಾಲ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಈ ಕಾರಣದಿಂದ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಮಿಳುನಾಡು, ಆಂಧ್ರಪ್ರದೇಶ ಮತ್ತು ಪುದುಚೇರಿಯ ಹಲವು ಪ್ರದೇಶಗಳಿಗೆ ರೆಡ್ ಅಲರ್ಟ್ ಘೋಷಿಸಿದೆ.

ತಮಿಳುನಾಡು ಹಾಗೂ ಪಾಂಡಿಚೇರಿ ಕರಾವಳಿಯ ಕಾರೈಕಲ್‌ ಮತ್ತು ಮಹಾಬಲಿಪುರಂ ನಡುವೆ ಫೆಂಗಲ್‌ ಚಂಡಮಾರುತ ಹಾದು ಹೋಗಲಿದ್ದು, ಗಂಟೆಗೆ 70-80 ಕಿಲೋ ಮೀಟರ್‌ ವೇಗದಲ್ಲಿ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ. ಇಂದು ರಾತ್ರಿ 7 ಗಂಟೆವರೆಗೆ ಚೆನ್ನೈ ವಿಮಾನ ನಿಲ್ದಾಣ ಮುಚ್ಚಲಿದ್ದು, ಸ್ಥಳೀಯ ರೈಲು ಸಂಚಾರ ಸ್ಥಗಿತಗೊಳಿಸುವುದಾಗಿ ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ಫೆಂಗಲ್‌ ಪ್ರಬಲ ಚಂಡಮಾರುತದಿಂದ ಚೆನ್ನೈನಲ್ಲಿ ಭಾರೀ ಮಳೆಯಾಗುತ್ತಿದ್ದು, ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಜನಜೀವನ ಅಸ್ತವ್ಯಸ್ತವಾಗಿದೆ. ಈ ವಾರದ ಆರಂಭದಲ್ಲಿ ಶ್ರೀಲಂಕಾದ ಕರಾವಳಿಯಲ್ಲಿ ಫೆಂಗಲ್ ಚಂಡಮಾರುತದಿಂದ ಆರು ಮಕ್ಕಳು ಸೇರಿದಂತೆ ಕನಿಷ್ಠ 12 ಜನರು ಬಲಿಯಾಗಿದ್ದಾರೆ.

- Advertisement -

Related news

error: Content is protected !!