Sunday, June 29, 2025
spot_imgspot_img
spot_imgspot_img

ಸಿಲಿಂಡರ್ ಸ್ಫೋಟ ಪ್ರಕರಣ; ಚಿಕಿತ್ಸೆ ಫಲಕಾರಿಯಾಗದೇ ಇಬ್ಬರು ಅಯ್ಯಪ್ಪ ಮಾಲಾಧಾರಿಗಳು ಸಾವು..!

- Advertisement -
- Advertisement -

ಹುಬ್ಬಳ್ಳಿ: ಮಲಗಿದ್ದ ವೇಳೆ ಸಿಲಿಂಡರ್ ಸ್ಫೋಟಗೊಂಡು 9 ಅಯ್ಯಪ್ಪ ಮಾಲಾಧಾರಿಗಳು ತೀವ್ರ ಗಾಯಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕಿತ್ಸೆ ಫಲಕಾರಿಯಾಗದೇ ಇಬ್ಬರು ಮಾಲಾಧಾರಿಗಳು ಮೃತಪಟ್ಟಿದ್ದಾರೆ.

ಮೃತಪಟ್ಟ ಅಯ್ಯಪ್ಪ ಮಾಲಾಧಾರಿಗಳನ್ನು ನಿಜಲಿಂಗಪ್ಪ ಮಲ್ಲಪ್ಪ ಬೇಪೂರು (58), ಸಂಜಯ್ ಪ್ರಕಾಶ್ ಸವದತ್ತಿ (17) ಎಂದು ಗುರುತಿಸಲಾಗಿದೆ.

ಹುಬ್ಬಳ್ಳಿಯ ಅಚ್ಚವನ ಕಾಲೋನಿಯ ಈಶ್ವರ ದೇವಾಲಯದಲ್ಲಿ ಮೂರು ದಿನಗಳ ಹಿಂದೆ ಸಿಲಿಂಡರ್‌ನಿಂದ ಗ್ಯಾಸ್ ಸೋರಿಕೆಯಾಗಿ ಬೆಂಕಿ ಅವಘಡ ಸಂಭವಿಸಿತ್ತು. ಘಟನೆಯಲ್ಲಿ ಒಂಬತ್ತು ಜನ ಮಾಲಾಧಾರಿಗಳು ತೀವ್ರವಾಗಿ ಗಾಯಗೊಂಡಿದ್ದರು. ಗಾಯಾಳುಗಳಿಗೆ ಕಳೆದ ಮೂರು ದಿನಗಳಿಂದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ 9 ಮಾಲಾಧಾರಿಗಳ ಪೈಕಿ ಇಬ್ಬರು ಕೊನೆಯುಸಿರೆಳೆದಿದ್ದಾರೆ.

- Advertisement -

Related news

error: Content is protected !!