ಮುಂಬೈ: ಬಾಲಿವುಡ್‌ನ ಹಿರಿಯ ನಟ ಮಿಥುನ್ ಚಕ್ರವರ್ತಿ ಅವರಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ಘೋಷಣೆ ಮಾಡಲಾಗಿದ್ದು, ಅಕ್ಟೋಬರ್ 08ರಂದು ನಡೆಯಲಿರುವ 70ನೇ ರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಈ ಪ್ರಶಸ್ತಿಯನ್ನು ಸ್ವೀಕಾರ ಮಾಡಲಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರು, ಮಿಥುನ್ ಅವರ ಗಮನಾರ್ಹ ಸಿನಿಮೀಯ ಪ್ರಯಾಣವು ಪೀಳಿಗೆಗೆ ಸ್ಫೂರ್ತಿ ನೀಡುತ್ತದೆ. ಭಾರತೀಯ ಚಿತ್ರರಂಗಕ್ಕೆ ಅವರ ಅಪ್ರತಿಮ ಕೊಡುಗೆಗಾಗಿ ಪೌರಾಣಿಕ ನಟರಾದ ಶಾ.ಮಿಥುನ್ ಚಕ್ರವರ್ತಿಯವರನ್ನು ದಾದಾಸಾಹೇಬ್ ಫಾಲ್ಕೆ ತೀರ್ಪುಗಾರರ ಸಮಿತಿಯು ಆಯ್ಕೆ ಮಾಡಿದೆ. ಅಕ್ಟೋಬರ್ 8 ರಂದು 70ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭದಲ್ಲಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವುದು ಎಂದು ತಿಳಿಸಿದ್ದಾರೆ.
ದಾದಾಸಾಹೇಬ್ ಫಾಲ್ಕೆ ಆಯ್ಕೆ ಸಮಿತಿಯು ಭಾರತೀಯ ಚಿತ್ರರಂಗಕ್ಕೆ ಅಪ್ರತಿಮ ಕೊಡುಗೆಗಾಗಿ ಖ್ಯಾತ ನಟ, ಶಾ. ಮಿಥುನ್ ಚಕ್ರವರ್ತಿ ಅವರಿಗೆ ಪ್ರಶಸ್ತಿ ನೀಡಲು ನಿರ್ಧರಿಸಿದೆ ಎಂದು ಘೋಷಿಸಲು ಸಂತೋಷವಾಗುತ್ತದೆ ಎಂದು ಪೋಸ್ಟ್ ಮಾಡಿದ್ದಾರೆ. ಇನ್ನು ಈ ವರ್ಷದ ಆರಂಭದಲ್ಲಿ ನಟ ಮಿಥುನ್ ಚಕ್ರವರ್ತಿ ಅವರಿಗೆ ಭಾರತದ 3ನೇ ಅತ್ಯುನ್ನತ ನಾಗರಿಕ ಪ್ರಶಸ್ತಿ ಪದ್ಮಭೂಷಣವನ್ನು ಘೋಷಣೆ ಮಾಡಲಾಗಿತ್ತು.