




ರಾಜ್ಯ ವಿಧಾನ ಪರಿಷತ್ ಉಪಚುನಾವಣೆಗೆ ದಿನಾಂಕ ನಿಗದಿಯಾಗಿದೆ. ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಮುಹೂರ್ತ ನಿಗದಿಯಾಗಿದೆ. ಕೋಟ ಶ್ರೀನಿವಾಸ್ ಪೂಜಾರಿ ರಾಜೀನಾಮೆಯಿಂದ ತೆರವಾಗಿರುವ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಉಪಚುನಾವಣೆ ಅಕ್ಟೋಬರ್ 21ರಂದು ನಡೆಯಲಿದೆ.
ಕೋಟಾ ಶ್ರೀನಿವಾಸ ಪೂಜಾರಿ ತೆರವಾದ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು, ನಳಿನ್ ಕುಮಾರ್ ಕಟೀಲ್ ಹೆಸರು ಮುಂಚುಣಿಯಲ್ಲಿ ಕೇಳಿ ಬರುತ್ತಿದೆ. ಸಂಸದ ಸ್ಥಾನ ವಂಚಿತರಾದ ಹಿನ್ನಲೆಯಲ್ಲಿ ನಳಿನ್ ಕುಮಾರ್ ಕಟೀಲ್‌ರವರಿಗೆ ಅವಕಾಶ ಸಿಗುವ ಸಾಧ್ಯತೆ ಹೆಚ್ಚಾಗಿದೆ ಎಂದು ಮೂಲಗಳಿಂದ ಮಾಹಿತಿ ಲಭಿಸಿದೆ. ನಳಿನ್ ಕುಮಾರ್ ಪರ ದಕ್ಷಿಣ ಕನ್ನಡ ಜಿಲ್ಲಾ ಶಾಸಕರು ಒಲವು ತೋರಿಸಿದ್ದಾರೆ.
ಸೆಪ್ಟೆಂಬರ್ 26ರಿಂದ ಅಧಿಸೂಚನೆ ಜಾರಿಯಾಗಲಿದೆ. ಅಕ್ಟೋಬರ್ 3ರಂದು ನಾಮಪತ್ರ ಸಲ್ಲಿಸಲು ಕೊನೆ ದಿನವಾಗಿದೆ. ಅಕ್ಟೋಬರ್ 4ರಂದು ನಾಮಪತ್ರಗಳ ಪರಿಶೀಲನ ನಡೆಯಲಿದ್ದು, ಅಕ್ಟೋಬರ್ 7 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. ಅಕ್ಟೋಬರ್ 21ರಂದು ಬೆಳಿಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದ್ದು, ಅಕ್ಟೋಬರ್ 24ರಂದು ಮತ ಎಣಿಕೆ ನಡೆಯಲಿದೆ.