Sunday, June 7, 2026
spot_imgspot_img
spot_imgspot_img

ಧರ್ಮಸ್ಥಳದಲ್ಲಿ ಹೆಣ ಹೂತಿದ್ದ ಹೇಳಿಕೆ ನೀಡಿ ಪೊಲೀಸ್ ದೂರು ನೀಡಿದ್ದ ವ್ಯಕ್ತಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು ʼಧರ್ಮಸ್ಥಳʼ ಪ್ರಕರಣದ ಕುರಿತು ಕಾನೂನು ಕ್ರಮ-ದ.ಕ ಜಿಲ್ಲಾ ಎಸ್ಪಿ

- Advertisement -
- Advertisement -

ಧರ್ಮಸ್ಥಳ’ ಪ್ರಕರಣದ ದೂರುದಾರ ಸಾಕ್ಷಿಯು ನೀಡಿರುವ ಅಸ್ಥಿಪಂಜರದ ಅವಶೇಷಗಳನ್ನು, ದೂರುದಾರರ ಪರ ವಕೀಲರು ಹಾಗೂ ಪಂಚರ ಸಮ್ಮುಖದಲ್ಲಿ ಪೊಲೀಸರು ಸ್ವಾಧೀನಕ್ಕೆ ಪಡೆದುಕೊಂಡಿದ್ದಾರೆ. ಈ ಕುರಿತು ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್‌ ಕೆ. ತಿಳಿಸಿದ್ದಾರೆ.

ಈ ಬಗ್ಗೆ ಮಾಧ್ಯಮಗಳಿಗೆ ಅಧಿಕೃತ ಮಾಹಿತಿ ನೀಡಿರುವ ಜಿಲ್ಲಾ ಎಸ್ಪಿ ಅವರು, ಜಿಲ್ಲೆಯ ಸಕ್ಷಮ ಪ್ರಾಧಿಕಾರವು ಸದ್ರಿ ಪ್ರಕರಣದಲ್ಲಿ ಸಾಕ್ಷಿಯ ರಕ್ಷಣೆಗೆ ಗುರುವಾರ ಸಂಜೆ, ತಕ್ಷಣದಿಂದಲೇ ಜಾರಿಗೆ ಬರುವಂತೆ ಅನುಮೋದನೆ ನೀಡಿದೆ.ಆದರೆ ಸಾಕ್ಷಿ ದೂರುದಾರರ ಗುರುತಿನ ರಕ್ಷಣೆಯ ವಿಚಾರದಲ್ಲಿ, ಸಾಕ್ಷಿ ದೂರುದಾರರನ್ನು ಪ್ರತಿನಿಧಿಸಿರುವ ವ್ಯಕ್ತಿಗಳು ಪತ್ರಿಕಾ ಪ್ರಕಟಣೆ ಹಾಗೂ ಎಫ್.ಐ.ಆರ್ ಪ್ರತಿಯನ್ನು ಮಾಧ್ಯಮಗಳಿಗೆ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ನೀಡುವ ಮೂಲಕ, ಸಾಕ್ಷಿ ದೂರುದಾರರ ವಯಸ್ಸು, ವೃತ್ತಿಯ ಸ್ಥಳ, ಚಹರೆ, ವೃತ್ತಿಯಲ್ಲಿದ್ದ ಅವಧಿ, ಸಮುದಾಯ ಮತ್ತು ಇತರೆ ಮಾಹಿತಿಗಳನ್ನು ಬಹಿರಂಗಗೊಳಿಸಿರುವುದರಿಂದ, ಸ್ಥಳೀಯ ಅನೇಕರು ಸಾಕ್ಷಿ ದೂರುದಾರರನ್ನು ಅಂದಾಜಿಸಿರುತ್ತಾರೆ. ಆದಾಗ್ಯೂ ಎಲ್ಲಾ ಅಧಿಕೃತ ಮೂಲಗಳಿಂದ ಸಾಕ್ಷಿ ದೂರುದಾರರ ಗುರುತನ್ನು ಬಹಿರಂಗಪಡಿಸದಿರಲು ನಿರ್ಧರಿಸಲಾಗಿದೆ ಹಾಗೂ ಈ ಬಗ್ಗೆ ಬಂಟ್ವಾಳ ಡಿವೈಎಸ್ಪಿ ಅವರ ನೇತೃತ್ವದಲ್ಲಿ ಪ್ರತ್ಯೇಕ ತನಿಖೆ ಆರಂಭಿಸಲಾಗಿದೆ ಎಂದಿದ್ದಾರೆ.

ಸಾಕ್ಷಿ ದೂರುದಾರರು ಸ್ವತಃ ತಾವೇ ಹೊರತೆಗೆದಿರುವುದಾಗಿ ತಿಳಿಸಿರುವ ಅಸ್ಥಿಪಂಜರದ ಅವಶೇಷಗಳನ್ನು ಹಾಜರುಪಡಿಸಿದ್ದು, ಅವುಗಳನ್ನು ಸಾಕ್ಷಿ ದೂರುದಾರರ ಪರ ವಕೀಲರು ಹಾಗೂ ಪಂಚರ ಸಮ್ಮುಖದಲ್ಲಿ ಪೊಲೀಸರು ಸ್ವಾಧೀನಕ್ಕೆ ಪಡೆದುಕೊಂಡಿದ್ದು, ಮುಂದಿನ ಕಾನೂನುಕ್ರಮ ಕೈಗೊಳ್ಳಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

- Advertisement -

Related news

error: Content is protected !!