Sunday, June 29, 2025
spot_imgspot_img
spot_imgspot_img

ದಕ್ಷಿಣ ಕನ್ನಡ ನೂತನ ಜಿಲ್ಲಾಧಿಕಾರಿಯಾಗಿ ದರ್ಶನ್ ಎಚ್.ವಿ. ಅಧಿಕಾರ ಸ್ವೀಕಾರ

- Advertisement -
- Advertisement -

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ದರ್ಶನ್ ಎಚ್.ವಿ. ಅವರು ಬುಧವಾರ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು.

ನಿರ್ಗಮಿತ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಎಂ.ಪಿ. ಅವರು ನೂತನ ಜಿಲ್ಲಾಧಿಕಾರಿಗೆ ಅಧಿಕಾರ ಹಸ್ತಾಂತರಿಸಿ ಶುಭ ಹಾರೈಸಿದರು. 2016 ಐಎಎಸ್ ಬ್ಯಾಚ್‌ನ ಅಧಿಕಾರಿಯಾಗಿರುವ ದರ್ಶನ್ ಎಚ್.ವಿ. ಅವರು ವಾಣಿಜ್ಯ ತೆರಿಗೆಗಳ ಇಲಾಖೆಯ ಬೆಂಗಳೂರಿನ ಸೇವಾ ವಿಶ್ಲೇಷಣೆ ವಿಭಾಗದ ಹೆಚ್ಚುವರಿ ಆಯುಕ್ತರಾಗಿದ್ದರು.

ಮುಲ್ಲೈ ಮುಗಿಲನ್ ಎಂಪಿ 2023 ಜೂನ್ 17 ರಂದು ದ.ಕ. ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದರು. ಇದೀಗ 2 ವರ್ಷ ಪುರ್ಣಗೊಳಿಸಿರುವ ಬೆನ್ನಲ್ಲೆ ಅವರಿಗೆ ವರ್ಗಾವಣೆಯಾಗಿದೆ.

- Advertisement -

Related news

error: Content is protected !!