Monday, May 6, 2024
spot_imgspot_img
spot_imgspot_img

ನಿಷೇಧಾಜ್ಞೆ ನಡುವೆಯೂ ಮಹಿಷ ದಸರಾ ಆಚರಣೆ – ಹಲವರ ಬಂಧನ

- Advertisement -G L Acharya panikkar
- Advertisement -

ನಿಷೇಧಾಜ್ಞೆ ನಡುವೆಯೂ ಮಹಿಷ ದಸರಾ ಆಚರಣೆ ಮಾಡಲು ಬಂದಿದ್ದ ಸಂಘಟನೆಯೊಂದರ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.

ನಗರದ ಹನುಮಂತಪ್ಪ ವೃತ್ತದಲ್ಲಿ ಅಂಗಡಿ ಚಂದ್ರು ನೇತೃತ್ವದಲ್ಲಿ ಪ್ರಗತಿಪರ ಸಂಘಟನೆ ಕಾರ್ಯಕರ್ತರು ಮಹಿಷಾಸುರನ ಭಾವಚಿತ್ರ ಪ್ರದರ್ಶನ ಮಾಡಿದ್ದಾರೆ ಈ ವೇಳೆ ಪೊಲೀಸರು ಕಾರ್ಯಕರ್ತರನ್ನು ತಡೆಯಲು ಮುಂದಾಗಿದ್ದು ಈ ವೇಳೆ ಕಾರ್ಯಕರ್ತರು ಪೋಲೀಸರ ವಿರುದ್ಧ ಕಿಡಿಕಾರಿದ್ದಾರೆ.
ಇನ್ನು ಮಹಿಷಾಸುರನ ಆಚರಣೆಗೆ ಅವಕಾಶ ನೀಡದ ನಿಟ್ಟಿನಲ್ಲಿ ಆಕ್ರೋಶಗೊಂಡ ಕಾರ್ಯಕರ್ತರು ಸರಕಾರದ ವಿರುದ್ಧ ಕಿಡಿಕಾರಿದ್ದಾರೆ.

ಈ ವೇಳೆ ಪೊಲೀಸರು ಹಾಗೂ ದಲಿತ ಸಂಘಟನೆ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದ್ದು, ಈ ವೇಳೆ ಪೊಲೀಸರು ಕಾರ್ಯಕರ್ತರನ್ನು ಬಂಧಿಸಿದ್ದಾರೆ.

- Advertisement -

Related news

error: Content is protected !!