Thursday, June 18, 2026
spot_imgspot_img
spot_imgspot_img

ರಾಜ್ಯದಲ್ಲಿ ಜಾತಿಗಣತಿಗೆ ದಿನಾಂಕ ನಿಗದಿ; ಸೆ.22ರಿಂದ ಅ.7ರ ವರೆಗೆ ಸಮೀಕ್ಷೆ ನಡೆಸಲು ನಿರ್ಧಾರ

- Advertisement -
- Advertisement -

ಬೆಂಗಳೂರು: ರಾಜ್ಯದಲ್ಲಿ ಜಾತಿಗಣತಿಗೆ ಕೊನೆಗೂ ದಿನಾಂಕ ನಿಗದಿಯಾಗಿದೆ. ಸೆ.22 ರಿಂದ ಅ.7 ರ ವರೆಗೆ ಸಮೀಕ್ಷೆ ನಡೆಸಲು ಸರ್ಕಾರ ನಿರ್ಧರಿಸಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಈ ಕುರಿತು ಸಭೆ ನಡೆಸಿದ ಸಿಎಂ, ಒಟ್ಟು 15 ದಿನಗಳ ಕಾಲ ಸಮೀಕ್ಷೆ ನಡೆಸಲು ನಿರ್ಧರಿಸಲಾಗಿದೆ. ಅಕ್ಟೋಬರ್ ಕೊನೆಯ ಒಳಗಾಗಿ ಸಮೀಕ್ಷೆ ವರದಿಯನ್ನು ಸಲ್ಲಿಸಬೇಕು. ತರಬೇತಿ ಸೇರಿದಂತೆ ಸಮೀಕ್ಷೆಗೆ ಪೂರ್ವಭಾವಿ ಸಿದ್ಧತೆಗಳನ್ನು ಈಗಲೇ ಆರಂಭಿಸಲು ಸೂಚನೆ ನೀಡಿದ್ದಾರೆ.

ಸಮೀಕ್ಷೆ ಅತ್ಯಂತ ಸಮರ್ಪಕವಾಗಿ ನಡೆಯಬೇಕು. ಸಮೀಕ್ಷೆ ಕುರಿತು ಯಾವುದೇ ದೂರುಗಳಿಗೆ ಆಸ್ಪದವಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಸಮೀಕ್ಷೆಯಿಂದ ಯಾರೂ ಹೊರಗುಳಿಯದಂತೆ ಖಾತ್ರಿಪಡಿಸಬೇಕು ಎಂದು ಸಿಎಂ ಸಭೆಯಲ್ಲಿ ಸೂಚಿಸಿದ್ದಾರೆ.

ಕಾಂತರಾಜು ಆಯೋಗ 54 ಪ್ರಶ್ನೆಗಳನ್ನು ಸಿದ್ಧಪಡಿಸಿ manual ಆಗಿ ಈ ಹಿಂದೆ ಸಮೀಕ್ಷೆ ನಡೆಸಿತ್ತು. ಈ ಬಾರಿಯ ಸಮೀಕ್ಷೆಯಲ್ಲಿ ಇನ್ನಷ್ಟು ಅಂಶಗಳನ್ನು ಸೇರಿಸುವ ಕುರಿತು ಪರಿಶೀಲನೆ ನಡೆಸಲಾಗುವುದು. ಈ ಬಾರಿ ಮೊಬೈಲ್ ಆ್ಯಪ್ ಬಳಸಿಕೊಂಡು ಸಮೀಕ್ಷೆ ನಡೆಸಲಾಗುವುದು. ತೆಲಂಗಾಣದಲ್ಲಿ ಕೈಗೊಳ್ಳಲಾಗಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಗಣತಿ ಕುರಿತು ಅಧ್ಯಯನ ನಡೆಸಲು ಸೂಚಿಸಲಾಗಿದೆ. ಸಮೀಕ್ಷೆ ಕಾರ್ಯದ ಮೇಲುಸ್ತುವಾರಿಗೆ ಉನ್ನತಮಟ್ಟದ ಸಮಿತಿ ರಚಿಸಲು ತಿರ್ಮಾನಿಸಲಾಗಿದೆ ಎಂದು ತಿಳಿಸಿದ್ದಾರೆ.

ಸಮೀಕ್ಷೆ ವೈಜ್ಞಾನಿಕವಾಗಿ ಮತ್ತು ಪಾರದರ್ಶಕವಾಗಿ ನಡೆಯಬೇಕು. ಸಮೀಕ್ಷೆಯಲ್ಲಿ ಕೇಳಬೇಕಾದ ಪ್ರಶ್ನೆಗಳನ್ನು ಅಂತಿಮಗೊಳಿಸಲು ತಜ್ಞರ ಸಮಿತಿಯ ನೆರವು ಪಡೆಯಬೇಕು. ಈ ಬಾರಿ ಸಮೀಕ್ಷೆ ಕಾರ್ಯಕ್ಕೆ 1.65 ಲಕ್ಷ ಗಣತಿದಾರರು ಸೇರಿದಂತೆ ಮಾನವ ಸಂಪನ್ಮೂಲ ಅವಶ್ಯಕತೆಯಿದೆ. ಸಮೀಕ್ಷೆ ಕಾರ್ಯಕ್ಕೆ ಶಿಕ್ಷಕರ ಸೇವೆಯೊಂದಿಗೆ ಇತರ ಇಲಾಖೆಗಳ ಸಿಬ್ಬಂದಿಯನ್ನು ಸಹ ಬಳಸಿಕೊಳ್ಳಲಾಗುವುದು. ಸಂಬಂಧಪಟ್ಟ ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ ಸಮೀಕ್ಷೆ ಕಾರ್ಯವನ್ನು ಯಶಸ್ವಿಗೊಳಿಸಬೇಕು ಎಂದು ಸೂಚಿಸಿದ್ದಾರೆ.

- Advertisement -

Related news

error: Content is protected !!