Saturday, June 6, 2026
spot_imgspot_img
spot_imgspot_img

ಸುನಿತಾ ವಿಲಿಯಮ್ಸ್, ಬುಚ್ ವಿಲ್ಮೋರ್ ಭೂಮಿಗೆ ಮರಳುವ ದಿನಾಂಕ ನಿಗದಿ

- Advertisement -
- Advertisement -

ನ್ಯೂಯಾರ್ಕ್: ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಸಿಲುಕಿರುವ ಭಾರತ ಮೂಲದ ನಾಸಾ ಗಗನಯಾತ್ರಿ ಸುನಿತಾ ವಿಲಿಯಮ್ಸ್ ಹಾಗೂ ಸಹ ಗಗನಯಾತ್ರಿ ಬುಚ್ ವಿಲ್ಮೋರ್ ಭೂಮಿಗೆ ಮರಳುವ ದಿನಾಂಕ ನಿಗದಿಯಾಗಿದೆ.

ಕಳೆದ ಒಂಬತ್ತು ತಿಂಗಳಿನಿಂದ ಬಾಹ್ಯಾಕಾಶ ನಿಲ್ದಾಣದಲ್ಲಿ ಸಿಲುಕಿಕೊಂಡಿರುವ ಸುನಿತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಅವರು ಈ ಮೊದಲು ಮಾರ್ಚ್ 19 ರ ಬೆಳಿಗ್ಗೆ 3:27ಕ್ಕೆ ಭೂಮಿಗೆ ಮರಳುವುದಾಗಿ ನಿಗದಿಯಾಗಿತ್ತು. ಆದರೆ ಪ್ರತಿಕೂಲ ಹವಾಮಾನದಿಂದಾಗಿ ಮಾಚ್ 18ರ 6 ಗಂಟೆ ಸುಮಾರಿಗೆ ಫ್ಲೋರಿಡಾ ಕರಾವಳಿಯಲ್ಲಿ ಸ್ಪೇಸ್‌ಎಕ್ಸ್‌ನ ಡ್ರ‍್ಯಾಗನ್ ಕ್ರಾಫ್ಟ್ ಬಾಹ್ಯಾಕಾಶ ನೌಕೆಯಲ್ಲಿ ಇಳಿಯಬಹುದು. ಎಂದು ಅಮೆರಿಕದ ಬಾಹ್ಯಾಕಾಶ ಸಂಸ್ಥೆ ನಾಸಾ ತಿಳಿಸಿದೆ.

ನಿತಾ ವಿಲಿಯಮ್ಸ್ ಹಾಗೂ ಬುಚ್ ವಿಲ್ಮೋರ್ ಮತ್ತು ಇತರ ಇಬ್ಬರು ಗಗನಯಾತ್ರಿಗಳು ಮಂಗಳವಾರ ಭೂಮಿಗೆ ಮರಳಲಿದ್ದಾರೆ. ಈ ನಾಲ್ವರು ಗಗನಯಾತ್ರಿಗಳನ್ನು ಹೊತ್ತ ಸ್ಪೇಸ್‌ಎಕ್ಸ್‌ನ ಡ್ರ‍್ಯಾಗನ್ ಕ್ರಾಫ್ಟ್ ಬಾಹ್ಯಾಕಾಶ ನೌಕೆ ಭಾನುವಾರ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣವನ್ನು ತಲುಪಿದೆ.

ಇನ್ನು ಕಳೆದ ಒಂಬತ್ತು ತಿಂಗಳಿನಿಂದ ಬಾಹ್ಯಾಕಾಶದಲ್ಲಿರುವ ಈ ಗಗನಯಾತ್ರಿಗಳಿಗೆ ಭೂಮಿಗೆ ಬಂದ ಮೇಲೆ ಇಲ್ಲಿನ ವಾತಾವರಣಕ್ಕೆ ಹೊಂದಿಕೊಳ್ಳುವುದಕ್ಕೆ ತೊಂದರೆಯಾಗಲಿದೆ. ಹೀಗಾಗಿ ವಿಲಿಯಮ್ಸ್, ವಿಲ್ಮೋರ್ ಇಬ್ಬರು ದೈಹಿಕ ತೊಂದರೆಗಳನ್ನ ಅನುಭವಿಸಲಿದ್ದಾರೆ.

- Advertisement -

Related news

error: Content is protected !!