Saturday, June 28, 2025
spot_imgspot_img
spot_imgspot_img

ಬೆಳ್ತಂಗಡಿ: ತಂದೆಯ ಎದುರಲ್ಲೇ ವಿದ್ಯುತ್ ಸ್ಪರ್ಶಿಸಿ ಮಗಳು ಸಾವು..! :

- Advertisement -
- Advertisement -

ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಮತ್ತೊಂದು ಬಲಿಯಾಗಿದೆ. ಸ್ಟೇ ವೈಯರ್‌ ನಿಂದ ವಿದ್ಯುತ್‌ ಹರಿದು ತಂದೆಯ ಎದುರಲ್ಲೇ ಮಗಳು ಮೃತಪಟ್ಟ ದಾರುಣ ಘಟನೆ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶಿಬಾಜೆಯಲ್ಲಿ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಶಿಬಾಜೆ ಗ್ರಾಮದ ಬರ್ಗುಲಾ ನಿವಾಸಿ ಪ್ರತೀಕ್ಷಾ ಶೆಟ್ಟಿ (21) ಮೃತ ಯುವತಿ.

ಗಣೇಶ್ ಶೆಟ್ಟಿ ಮತ್ತು ರೋಹಿಣಿ ದಂಪತಿ ಪುತ್ರಿ ಪ್ರತೀಕ್ಷಾ ಮನೆ ಬಳಿ ಬಂದ ಪಾರ್ಸೆಲ್ ಅನ್ನು ಸ್ವೀಕರಿಸಲು ಹೋದಾಗ ಅವಘಡ ಸಂಭವಿಸಿದೆ ರಸ್ತೆಯಲ್ಲಿ ಹರಿದಾಡುತ್ತಿದ್ದ ನೀರಿನಲ್ಲಿ ವಿದ್ಯುತ್ ಪ್ರವಹಿಸಿದ ಪರಿಣಾಮ ಅದನ್ನು ಸ್ಪರ್ಶಿಸಿದ ಪ್ರತಿಕ್ಷಾಗೆ ವಿದ್ಯುತ್ ಆಘಾತವಾಗಿದೆ.

ದುರ್ಘಟನೆ ತಂದೆಯ ಎದುರಿನಲ್ಲೇ ನಡೆದಿದ್ದು, ರಕ್ಷಿಸಲು ಧಾವಿಸಿದ ತಂದೆಗೂ ವಿದ್ಯುತ್ ಆಘಾತವಾಗಿದ್ದು, ಆದರೆ ಪುತ್ರಿಯನ್ನು ರಕ್ಷಿಸಲು ಸಾಧ್ಯವಾಗಿಲ್ಲ ಎಂದು ತಿಳಿದು ಬಂದಿದೆ. ಸ್ಟೇ ವೈಯರ್ ಗೆ ವಿದ್ಯುತ್ ತಂತಿ ಸ್ಪರ್ಶಿಸಿದ ಪರಿಣಾಮ ಅದು ನೀರಿಗೆ ಪ್ರವಾಹಿಸಿದೆ. ಪರಿಣಾಮ ವಿದ್ಯುತ್ ಶಾಕ್ ಹೊಡೆದಿದೆ ಎಂದು ಪ್ರಾಥಮಿಕ ಮಾಹಿತಿ ಲಭಿಸಿದೆ. ತಕ್ಷಣ ಆಕೆಯನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕರೆ ತರಲಾಯಿತಾದರೂ ಪ್ರತೀಕ್ಷಾ ಶೆಟ್ಟಿ ಅದಾಗಲೆ ಮೃತಪಟ್ಟಿದ್ದರು. ಯುವತಿಯ ಮೃತದೇಹ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಇರಿಸಲಾಗಿದೆ. ಈ ಘಟನೆಯೂ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

- Advertisement -

Related news

error: Content is protected !!