- Advertisement -
- Advertisement -


ದಾವಣಗೆರೆ: ಮಾನಸಿಕ ಅಸ್ವಸ್ಥ ಬಾಲಕಿ ಮೇಲೆ ನಿರಂತರ ಅತ್ಯಾಚಾರ ಎಸಗಿದ್ದ ಕಾಮುಕನಿಗೆ ದಾವಣಗೆರೆ ಜಿಲ್ಲಾ ವಿಶೇಷ ಪೋಕ್ಸೋ ಕೋರ್ಟ್ 21 ವರ್ಷ ಜೈಲು ಶಿಕ್ಷೆ ವಿಧಿಸಿದೆ.
ಹೊನ್ನಾಳಿ ತಾಲೂಕಿನ ಗ್ರಾಮವೊಂದರ 24 ವರ್ಷದ ಅಪರಾಧಿ ಬಾಲಕಿಯೊಬ್ಬಳನ್ನು ಮನೆಗೆ ಕರೆದೊಯ್ದು ನಿರಂತರ ಅತ್ಯಾಚಾರವೆಸಗುತ್ತಿದ್ದ ವಿಚಾರ 2024 ರಲ್ಲಿ ಬೆಳಕಿಗೆ ಬಂದಿತ್ತು. ಈ ಸಂಬಂಧ ಪೋಕ್ಸೋ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ವಿಚಾರಣೆ ವೇಳೆ ಯುವಕನ ಕೃತ್ಯ ಸಾಬೀತಾಗಿದ್ದು, ಅಪರಾಧಿಗೆ ಶಿಕ್ಷೆ ವಿಧಿಸಲಾಗಿದೆ.
ಅಪರಾಧಿಗೆ 21 ವರ್ಷ ಜೈಲು, 30,000 ರೂ. ದಂಡ ಹಾಗೂ ಸಂಸತ್ರಸ್ತೆಗೆ 10.50 ಲಕ್ಷ ರೂ. ಪರಿಹಾರ ನೀಡುವಂತೆ ಕೋರ್ಟ್ ಆದೇಶಿಸಿದೆ. ಸಂತ್ರಸ್ತೆ ಪರವಾಗಿ ಸರ್ಕಾರಿ ವಕೀಲೆ ಗೋಪಿಕಾ ಅವರು ವಾದ ಮಂಡಿಸಿದ್ದರು.
- Advertisement -








