- Advertisement -
- Advertisement -



ದಾವಣಗೆರೆ: ಹರಪ್ಪನಹಳ್ಳಿ ತಾಲೂಕಿನ ಸತ್ತೂರು ಗೊಲ್ಲರಹಟ್ಟಿಯಲ್ಲಿ ಪ್ರೇಮಿಗಳಿಬ್ಬರು ಪ್ರೀತಿಸಿ ಮದುವೆಯಾದ ವಿಚಾರಕ್ಕೆ ಯುವತಿ ಹಾಗೂ ಯುವಕನ ಸಮುದಾಯದ ಜನರ ನಡುವೆ ಮಾರಾಮಾರಿ ನಡೆದಿದೆ. ಈ ಗಲಾಟೆಯಲ್ಲಿ ಐದಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ನಾಲ್ಕು ದಿನಗಳ ಹಿಂದೆ ಇದೇ ಗ್ರಾಮದ ಪ್ರೇಮಿಗಳು ಮದುವೆಯಾಗಿದ್ದರು. ಇದರಿಂದ ರೊಚ್ಚಿಗೆದ್ದ ಯುವತಿಯ ಸಮುದಾಯದ ನೂರಾರು ಯುವಕರು ಹಾಗೂ ಕುಟುಂಬಸ್ಥರು ಮದುವೆಯಾದ ಯುವಕನ ಕುಟುಂಬಸ್ಥರ ಮೇಲೆ ಹಲ್ಲೆ ಮಾಡಿದ್ದಾರೆ. ಹೆಂಗಸರು ಮಕ್ಕಳೆನ್ನದೇ ಹಲ್ಲೆ ನಡೆಸಿದ್ದಾರೆ. ಹಲ್ಲೆಯ ದೃಶ್ಯ ಸಿಸಿ ಕ್ಯಾಮೆರಾ ಹಾಗೂ ಮೊಬೈಲ್‌ನಲ್ಲಿ ಸೆರೆಯಾಗಿದೆ.
ಗ್ರಾಮದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ. ಗಲಾಟೆಯಲ್ಲಿ ಗಾಯಗೊಂಡವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಹಲ್ಲೆ ನಡೆಸಿದವರ ಮೇಲೆ ಕ್ರಮ ಕೈಗೊಳ್ಳುವಂತೆ ಯುವಕನ ಕುಟುಂಬಸ್ಥರು ಆಗ್ರಹಿಸಿದ್ದಾರೆ. ಅರಸೀಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
- Advertisement -








