- Advertisement -
- Advertisement -




ದಾವಣಗೆರೆ: ಕುಡಿದ ಮತ್ತಲ್ಲಿ ಮಗನೇ ತಾಯಿಯನ್ನು ಗೋಡೆಗೆ ಗುದ್ದಿ ಹತ್ಯೆಗೈದ ಪ್ರಕರಣ ದಾವಣಗೆರೆ ತಾಲೂಕಿನ ಆರನೇಕಲ್ಲು ಗ್ರಾಮದಲ್ಲಿ ನಡೆದಿದೆ.
ಪ್ರೇಮ (60) ಮಗನಿಂದ ಕೊಲೆಯಾದ ದುರ್ದೈವಿ. ಆನಂದ್ ಕೊಲೆ ಮಾಡಿದ ಆರೋಪಿಯಾಗಿದ್ದಾನೆ. ಕಳೆದ ರಾತ್ರಿ ಕುಡಿದ ಮತ್ತಿನಲ್ಲಿ ತಾಯಿಯನ್ನ ಗೋಡೆಗೆ ಗುದ್ದಿ ಕೊಲೆ ಮಾಡಿದ್ದಾನೆ ಎಂದು ತಿಳಿದು ಬಂದಿದೆ. ಕೊಲೆಗೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ.
ಸ್ಥಳಕ್ಕೆ ಹದಡಿ ಠಾಣಾ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ಸಂಬಂಧ ಹೆಚ್ಚಿನ ತನಿಖೆ ನಡೆಯುತ್ತಿದೆ.
- Advertisement -







