- Advertisement -
- Advertisement -



ದಾವಣಗೆರೆ: ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿ ಮೃತಪಟ್ಟಿರುವ ಘಟನೆ ದಾವಣಗೆರೆಯ ಜಗಳೂರು ತಾಲೂಕಿನ ಗೋಗುದ್ದು ಗ್ರಾಮದಲ್ಲಿ ನಡೆದಿದೆ.
ಗೋಗುದ್ದು ಗ್ರಾಮದ ಚಮನ್ ಸಾಬ್ ಹಾಗೂ ಫಾತೀಮಾ ದಂಪತಿಯ ದ್ವಿತಿಯ ಪುತ್ರ ಮುಜಾಮಿಲ್(15) ಮೃತ ವಿದ್ಯಾರ್ಥಿ. ಈತನು ಹನುಮಂತಪುರ ಗ್ರಾಮದ ರಾಜೀವ್ ಗಾಂಧಿ ವಸತಿ ಶಾಲೆಯಲ್ಲಿ 9 ನೇ ತರಗತಿ ಓದುತ್ತಿದ್ದ ಎಂದು ತಿಳಿದುಬಂದಿದೆ.
ರಜೆ ಹಿನ್ನೆಲೆ ವಿದ್ಯಾರ್ಥಿ ಮನೆಗೆ ಬಂದಿದ್ದ. ಮನೆಯಲ್ಲಿ ಬೆಳಗಿನ ಜಾವ ಬಹಿರ್ದೆಸೆಗೆ ಹೋಗಿದ್ದಾಗ ಹೃದಯಾಘಾತವಾಗಿದ್ದು, ಕೂಡಲೇ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಮಾರ್ಗ ಮಧ್ಯೆ ಬಾಲಕ ಕೊನೆಯುಸಿರೆಳೆದಿದ್ದಾನೆ ಎಂಬುದಾಗಿ ತಿಳಿದು ಬಂದಿದೆ.
- Advertisement -








