Tuesday, December 3, 2024
spot_imgspot_img
spot_imgspot_img

ಕಲ್ಯಾಣ ಮಂಟಪಕ್ಕೆ ನುಗ್ಗಿ ಚಿನ್ನಾಭರಣ ಕಳ್ಳತನ; ಆರೋಪಿಗಳಿಬ್ಬರು ಅರೆಸ್ಟ್‌..!

- Advertisement -
- Advertisement -

ದಾವಣಗೆರೆ: ಕಲ್ಯಾಣ ಮಂಟಪಕ್ಕೆ ನುಗ್ಗಿ ಚಿನ್ನಾಭರಣ ಕಳ್ಳತನ ಮಾಡುತ್ತಿದ್ದ ಇಬ್ಬರು ಖತರ್ನಾಕ್ ಕಳ್ಳರನ್ನು ದಾವಣಗೆರೆ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ದಾವಣಗೆರೆಯ ಶಾಂತಿನಗರ ನಿವಾಸಿಗಳಾದ ಕಿರಣ್ ನಾಯ್ಕ್ (25), ವಿನೋದ್ ನಾಯ್ಕ್ (23) ಎಂದು ಗುರುತಿಸಲಾಗಿದೆ.

ಆರೋಪಿಗಳು ಮದುವೆ ನಡೆಯುತ್ತಿದ್ದಾಗ ಕಲ್ಯಾಣ ಮಂಟಪಕ್ಕೆ ನುಗ್ಗಿ ಕಳ್ಳತನ ಮಾಡುತ್ತಿದ್ದರು. ಇತ್ತೀಚೆಗೆ ನಿಜಲಿಂಗಪ್ಪ ಬಡಾವಣೆಯ ಕಲ್ಯಾಣ ಮಂಟಪದಲ್ಲಿ ನಡೆಯುತ್ತಿದ್ದ ಮದುವೆಗೆ ನುಗ್ಗಿ ಕಳ್ಳತನ ಮಾಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳು ಸುಮಾರು 73 ಗ್ರಾಂ ತೂಕದ ಮಾಂಗಲ್ಯ ಸರ, ಚೈನ್ ಹಾಗೂ ಒಂದು ಜೊತೆ ಚಿಕ್ಕ ಜುಮುಕಿ ಕಳ್ಳತನ ಮಾಡಿಕೊಂಡು ಬಂದಿದ್ದರು. ಈ ಬಗ್ಗೆ ಬಡಾವಣೆ ಠಾಣೆಯಲ್ಲಿ ದೂರು ದಾಖಲಾಗಿತ್ತು. ಇದೀಗ ಪೊಲೀಸರು ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಬಂಧಿತರಿಂದ ಅಂದಾಜು 7,83,000 ರೂ. ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ. ಕಿರಣ್ ನಾಯ್ಕ್ ಈ ಹಿಂದೆ 12 ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದಾನೆ ಎಂಬ ಆರೋಪವಿದೆ.

- Advertisement -

Related news

error: Content is protected !!