- Advertisement -
- Advertisement -
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಹೆಚ್ಚಳ ಹಿನ್ನೆಲೆಯಲ್ಲಿ ,ಜಿಲ್ಲಾಧಿಕಾರಿ ಕಛೇರಿಗೆ ಮೂರು ದಿನಗಳ ಕಾಲ ಸಾರ್ವಜನಿಕ ಪ್ರವೇಶವನ್ನು ನಿರ್ಬಂಧಸಲಾಗಿದೆ.ಜುಲೈ.3ರಿಂದ 5ರವರೆಗೆ ಜಿಲ್ಲಾಧಿಕಾರಿ ಕಚೇರಿಗೆ ಸಂಕೀರ್ಣದಲ್ಲಿರುವ ಮಾನ್ಯಸಂಸದರು ಮತ್ತು ಮಾನ್ಯ ಸಚಿವರ ಕಛೇರಿಗಳನ್ನೊಳಗೊಂಡಂತೆ ಎಲ್ಲಾ ಕಛೇರಿಗಳನ್ನು ಸಂಪೂರ್ಣವಾಗಿ ಸ್ಯಾನಿಟೈಸ್ ಮಾಡುವ ಕಾರಣದಿಂದ ಸಾರ್ವಜನಿಕ ಪ್ರವೇಶ ನಿರ್ಬಂಧಸಲಾಗಿದೆ.ಸಾರ್ವಜನಿಕರು ಜಿಲ್ಲಾಡಳಿತದೊಂದಿಗೆ ಸಹಕರಿಸಬೇಕು ಎಂದು ದ.ಕ.ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ಆದೇಶಸಿದ್ದಾರೆ.
- Advertisement -