- Advertisement -
- Advertisement -
ಬಂಟ್ವಾಳ: ಘಟ್ಟ ಪ್ರದೇಶ ಹಾಗೂ ಕರಾವಳಿ ಭಾಗದಲ್ಲಿ ಹಾಗೂ ಘಟ್ಟ ಪ್ರದೇಶ ವ್ಯಾಪಕ ಮಳೆಯಾಗಿರುವ ಪರಿಣಾಮ ನೇತ್ರಾವತಿ ತುಂಬಿ ಹರಿಯುತ್ತಿದೆ.ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಅವರು ಶುಕ್ರವಾರ ತುಂಬೆ ಡ್ಯಾಂಗೆ ಭೇಟಿ ನೀಡಿ ಪರಿಶೀಲಿಸಿದರು.
ಡ್ಯಾಂನ ನೀರಿನ ಮಟ್ಟ ಹಾಗೂ ಪ್ರವಾಹ ಪರಿಸ್ಥಿತಿಯ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು.ಈ ಸಂದರ್ಭದಲ್ಲಿ ಮಂಗಳೂರು ಎಸಿ ಮದನ್ ಮೋಹನ್ ಸಿ, ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್.ಆರ್. ಮನಪಾ ಅಧಿಕಾರಿ ಮೊಹಮ್ಮದ್ ನಝೀರ್, ಮೊದಲಾದವರು ಜಿಲ್ಲಾಧಿಕಾರಿಯವರಿಗೆ ಸಾಥ್ ನೀಡಿದರು.
- Advertisement -