- Advertisement -
- Advertisement -





ನವದೆಹಲಿ: ಐಪಿಎಲ್ ಟೂರ್ನಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಭರ್ಜರಿ ಜಯ ಸಾಧಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಇದೀಗ ಮತ್ತೆ ಐಪಿಎಲ್ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ.ಇಂದು ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ 2ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ನೀಡಿದ 163 ರನ್ ಗಳ ಗುರಿಯನ್ನು ಬೆನ್ನು ಹತ್ತಿದ ಆರ್ ಸಿಬಿ ಕೃನಾಲ್ ಪಾಂಡ್ಯಾ ಮತ್ತು ವಿರಾಟ್ ಕೊಹ್ಲಿ ಅವರ ಅರ್ಧಶತಕಗಳ ನೆರವಿನಿಂದ ಜಯಭೇರಿ ಭಾರಿಸಿತು. ಆರ್ ಸಿಬಿ 18.3 ಓವರ್ ನಲ್ಲಿ 165 ರನ್ ಗಳಿಸಿ ಇನ್ನೂ 9 ಎಸೆತ ಬಾಕಿ ಇರುವಂತೆಯೇ 6 ವಿಕೆಟ್ ಅಂತರದ ಭರ್ಜರಿ ಜಯ ದಾಖಲಿಸಿತು.
ಈ ಮೂಲಕ ಆರ್ ಸಿಬಿ ತನ್ನ ಅಂಕಗಳ ಗಳಿಕೆಯನ್ನು 14ಕ್ಕೆ ಏರಿಸಿಕೊಂಡಿದ್ದು ಮಾತ್ರವಲ್ಲದೇ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ. ಹಾಲಿ ಟೂರ್ನಿಯಲ್ಲಿ ಆರ್ ಸಿಬಿ ಒಟ್ಟು 10 ಪಂದ್ಯಗಳ ಪೈಕಿ 7 ಪಂದ್ಯಗಳಲ್ಲಿ ಗೆಲುವು ಸಾಧಿಸಿ 3 ಪಂದ್ಯಗಳಲ್ಲಿ ಸೋಲು ಕಂಡಿದೆ.
- Advertisement -