Friday, March 5, 2021

ಅತಿಥಿ ಉಪನ್ಯಾಸಕರಿಗೆ ಸರ್ಕಾರದಿಂದ ಸಿಹಿಸುದ್ದಿ!!

ಬೆಂಗಳೂರು(ನ.14): ರಾಜ್ಯದ ಎಲ್ಲ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರಿಗೆ ಐದು ತಿಂಗಳ ಬಾಕಿ ವೇತನ ಬಿಡುಗಡೆ ಮಾಡಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌.ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.

ಟ್ವೀಟ್‌ ಮಾಡಿರುವ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌.ಅಶ್ವತ್ಥ ನಾರಾಯಣ ರವರು ಅತಿಥಿ ಉಪನ್ಯಾಸಕರ ಐದು ತಿಂಗಳ ಬಾಕಿ ವೇತನವನ್ನು ಸರ್ಕಾರದಿಂದ ಬಿಡುಗಡೆಗೊಳಿಸಲಾಗಿದೆ. ಅತಿಥಿ ಉಪನ್ಯಾಸಕರ ಆರ್ಥಿಕ ಭದ್ರತೆ ಹಾಗೂ ಹಿತರಕ್ಷಣೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರ ನೇತೃತ್ವದ ನಮ್ಮ ಸರ್ಕಾರ ಸದಾ ಬದ್ಧವಾಗಿದೆ ಎಂದು ಹೇಳಿದ್ದಾರೆ.

- Advertisement -

MOST POPULAR

HOT NEWS

Related news

error: Content is protected !!