Tuesday, September 10, 2024
spot_imgspot_img
spot_imgspot_img

ದೆಹಲಿಯಲ್ಲಿ ವರಿಷ್ಠರೊಂದಿಗಿನ ಭೇಟಿ ಪೂರ್ವ ನಿರ್ಧರಿತ: ಲಕ್ಷಣ ಸವದಿ ಸ್ಪಷ್ಟನೆ

- Advertisement -G L Acharya panikkar
- Advertisement -

ಬೆಂಗಳೂರು: ಡಿಸಿಎಂ ಲಕ್ಷಣ್ ಸವದಿ ದಿಢೀರ್ ದೆಹಲಿಗೆ ಪ್ರವಾಸ ಕೈಗೊಂಡಿದ್ದು ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಗೆ ಕಾರಣವಾಗಿತ್ತು. ಆದರೆ ದೆಹಲಿಯಲ್ಲಿ ವರಿಷ್ಠರೊಂದಿಗಿನ ಭೇಟಿ ಪೂರ್ವ ನಿರ್ಧಾರವಾಗಿತ್ತು. ಇದರ ಬಗ್ಗೆ ಕಲ್ಪಿತ ವರದಿ ಬೇಡ ಎಮದು ಸ್ವತಃ ಲಕ್ಷಣ ಸವದಿ ಸ್ಪಷ್ಟನೆ ಕೊಟ್ಟಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ನನ್ನ ದೆಹಲಿ ಭೇಟಿಯ ಬಗ್ಗೆ ಅನಗತ್ಯವಾದ ಪ್ರಚಾರ ಬೇಡ. ದೆಹಲಿಯಲ್ಲಿ ವರಿಷ್ಠರೊಂದಿಗಿನ ಭೇಟಿ ಪೂರ್ವ ನಿರ್ಧಾರಿತವಾಗಿದ್ದ ಕಾರ್ಯಕ್ರಮ ಅದರ ಬಗ್ಗೆ ಕಲ್ಪಿತ ವರದಿ ದಯವಿಟ್ಟು ಬೇಡ .ನನ್ನ ಕ್ಷೇತ್ರದ ಹಿತೈಷಿಗಳೇ ಸಾಮಾಜಿಕ ಜಾಲತಾಣಗಳಲ್ಲಿ ದಯವಿಟ್ಟು ಆಧಾರ ರಹಿತ ಪೋಸ್ಟ್ ಗಳನ್ನು ಮಾಡದಿರಿ ಎಂದು ಪೋಸ್ಟ್ ಮಾಡಿದ್ದಾರೆ.

ಕ್ಷೇತ್ರದ ಜನತೆ ಪೋಸ್ಟ್ ಗಳನ್ನು ಹಾಕಿದ್ದಾರೆ ಎನ್ನುತ್ತಾ ಸತ್ಯಕ್ಕೆ ದೂರವಾದ ಸುದ್ದಿಗಳನ್ನು ಪ್ರಸಾರ ಮಾಡದಿರುವಂತೆ ಜವಾಬ್ದಾರಿಯುತ ಮಾಧ್ಯಮಗಳಲ್ಲಿ ಮನವಿ ಮಾಡುತ್ತಿದ್ದೇನೆ. ಕೋವಿಡ್ ಸಮಸ್ಯೆಯನ್ನು ಎದುರಿಸಿ ಒಂದು ವರ್ಷ ಉತ್ತಮ ಆಡಳಿತ ನೀಡಿರುವ ನಾವೆಲ್ಲರೂ ಪಕ್ಷಕ್ಕೆ ನಿಷ್ಠರು ಹಾಗೂ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧರು.
ಮಾಧ್ಯಮ ಮಿತ್ರರ ಸಹಕಾರ ಅತ್ಯವಶ್ಯ. ವಸ್ತು ನಿಷ್ಠ ವರದಿ ನಿಮ್ಮದಾಗಿರುತ್ತದೆ ಎಂಬ ನಂಬಿಕೆ ಇದೆ ಎಂದು ಹೇಳಿದ್ದಾರೆ.

- Advertisement -

Related news

error: Content is protected !!