Tuesday, October 27, 2026
spot_imgspot_img
spot_imgspot_img

ಡಿಸಿಎಂ ಪರಮೇಶ್ವರ್ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು

- Advertisement -
- Advertisement -

ಬೆಂಗಳೂರು: ಡಿಸಿಎಂ ಡಾ. ಜಿ. ಪರಮೇಶ್ವರ್ ಅವರಿಗೆ ತೀವ್ರ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಬೆಂಗಳೂರಿನ ವೈದೇಹಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಹಠಾತ್ ಆರೋಗ್ಯ ಏರುಪೇರಾದ ಕಾರಣ ಕುಟುಂಬಸ್ಥರು ಹಾಗೂ ಭದ್ರತಾ ಸಿಬ್ಬಂದಿ ಅವರನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಿದ್ದಾರೆ. ಪರಮೇಶ್ವರ್‌ ಅನಾರೋಗ್ಯಕ್ಕೆ ಒಳಗಾದ ಹಿನ್ನೆಲೆಯಲ್ಲಿ ಸಿಎಂ ಡಿಕೆ ಶಿವಕುಮಾರ್‌ ಆಸ್ಪತ್ರೆಗೆ ದೌಡಾಯಿಸಿದ್ದಾರೆ.

ವೈದೇಹಿ ಆಸ್ಪತ್ರೆಯ ಹಿರಿಯ ವೈದ್ಯರ ತಂಡವು ಸಚಿವರ ಆರೋಗ್ಯ ತಪಾಸಣೆ ನಡೆಸುತ್ತಿದ್ದು, ಅಗತ್ಯ ರಕ್ತ ಪರೀಕ್ಷೆ, ಇಸಿಜಿ ಸೇರಿದಂತೆ ವಿವಿಧ ವೈದ್ಯಕೀಯ ತಪಾಸಣೆಗಳಿಗೆ ಒಳಪಡಿಸಿದೆ.

ವೈದ್ಯರ ತೀವ್ರ ನಿಗಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ವೈದ್ಯರ ತಂಡ ಅವರ ಆರೋಗ್ಯ ಸ್ಥಿತಿಯನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡುತ್ತಿದೆ. ಸಚಿವರ ಆರೋಗ್ಯ ಪರಿಸ್ಥಿತಿ ಕುರಿತಂತೆ ಆಸ್ಪತ್ರೆ ಆಡಳಿತ ಮಂಡಳಿಯು ಶೀಘ್ರದಲ್ಲೇ ಅಧಿಕೃತ ಹೆಲ್ತ್ ಬುಲೆಟಿನ್ ಹೊರಡಿಸುವ ಸಾಧ್ಯತೆಯಿದೆ.

ಕ್ರೀಡಾ ಸಚಿವರಾದ ಡಾ. ಜಿ. ಪರಮೇಶ್ವರ ಅವರು ವಸಂತನಗರದಲ್ಲಿ ಕರ್ನಾಟಕ ಬ್ಯಾಡ್ಮಿಂಟನ್ ಅಸೋಸಿಯೇಷನ್ ವತಿಯಿಂದ ಇಂದು ಬೆಂಗಳೂರಿನಲ್ಲಿ ಬ್ಯಾಡ್ಮಿಂಟನ್ ಅಸೋಸಿಯೇಷನ್ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಿರುವ ‘ಇಂಡಿಯಾ ಇಂಟರ್‌ನ್ಯಾಷನಲ್ ಚಾಲೆಂಜ್–2026’ ಬ್ಯಾಡ್ಮಿಂಟನ್ ಕ್ರೀಡಾಕೂಟಕ್ಕೆ ಚಾಲನೆ ನೀಡಿದ್ದರು. ಈ ಕಾರ್ಯಕ್ರಮದಲ್ಲಿ ಬಳಲಿದಂತೆ ಕಂಡುಬಂದ ಕಾರಣ ಅವರು ಆಸ್ಪತ್ರೆಗೆ ದಾಖಲಾಗಿದ್ದರು.

ಸಚಿವರ ಆರೋಗ್ಯ ಪರಿಸ್ಥಿತಿ ಕುರಿತಂತೆ ಮಾಹಿತಿ ನೀಡಿದ ಆರೋಗ್ಯ ಸಚಿವ ಯು ಟಿ ಖಾದರ್, ಪರಮೇಶ್ವರ್ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಹೇಳಿರುವುದಾಗಿ ತಿಳಿದುಬಂದಿದೆ.

- Advertisement -

Related news

error: Content is protected !!