- Advertisement -
- Advertisement -
ಮಂಗಳೂರು,: ಮುಕ್ಕಾದ ರೆಡ್‌ರಾಕ್ ಬೀಚ್‌ನಲ್ಲಿ ಸ್ನೇಹಿತರೊಂದಿಗೆ ಈಜಲು ತೆರಳಿದ್ದ ವೇಳೆ ನೀರು ಪಾಲಾಗಿದ್ದ ಯುವಕ ಪ್ರಜ್ವಲ್ ಅವರ ಮೃತದೇಹ ಗುರುವಾರ ಸಸಿಹಿತ್ಲು ಸಮೀಪದ ಆಳ ಸಮುದ್ರದಲ್ಲಿ ಪತ್ತೆಯಾಗಿದೆ.
ಆಳ ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ಮೀನುಗಾರರು ಪ್ರಜ್ವಲ್ ಮೃತದೇಹ ತೇಲುತ್ತಿರುವುದನ್ನು ಗಮನಿಸಿ ಕರಾವಳಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳೀಯ ಮೀನುಗಾರರೊಂದಿಗೆ ಕರಾವಳಿ ಪೊಲೀಸರು ರಕ್ಷಣಾ ಬೋಟ್‌ನಲ್ಲಿ ಸ್ಥಳಕ್ಕೆ ತೆರಳಿ ಮೃತದೇಹವನ್ನು ದಡಕ್ಕೆ ತಂದಿದ್ದಾರೆ ಎಂದು ತಿಳಿದುಬಂದಿದೆ.
- Advertisement -