Saturday, June 6, 2026
spot_imgspot_img
spot_imgspot_img

ಕಾಸರಗೋಡು: ರಸ್ತೆ ಬದಿಯಲ್ಲಿ ಪಂಚಾಯತ್ ಮಹಿಳಾ ಸದಸ್ಯೆಯ ಮೃತದೇಹ ಪತ್ತೆ

- Advertisement -
- Advertisement -

ಕಾಸರಗೋಡು: ಪಂಚಾಯತ್ ಮಹಿಳಾ ಸದಸ್ಯೆರೋರ್ವರು ರಸ್ತೆ ಬದಿಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಮೊಗ್ರಾಲ್ ಪುತ್ತೂರು ಸಮೀಪ ನಡೆದಿದೆ.

ಮೊಗ್ರಾಲ್ ಪುತ್ತೂರು ಪಂಚಾಯತ್ ಮೂರನೇ ವಾರ್ಡ್ ಸದಸ್ಯೆ ಪುಷ್ಪಾ( 45) ಮೃತಪಟ್ಟವರು.

ಸೋಮವಾರ ಮಧ್ಯಾಹ್ನ ಪರಿಸರವಾಸಿ ರೋರ್ವರು ಗಮನಿಸಿದ್ದು, ಕೂಡಲೇ ಸ್ಥಳೀಯರ ನೆರವಿನಿಂದ ಆಟೋ ರಿಕ್ಷಾವೊಂದರಲ್ಲಿ ಕಾಸರಗೋಡಿನ ಆಸ್ಪತ್ರೆಗೆ ಕೊಂಡೊಯ್ದರೂ ಆಗಲೇ ಮೃತಪಟ್ಟಿದ್ದರು.

ಮೊಗ್ರಾಲ್ ಪುತ್ತೂರು ಕೋಟೆಗುಡ್ಡೆ ಕ್ವಾಟರ್ಸ್ ಸಮೀಪ ಪತ್ತೆಯಾಗಿದ್ದರು. ಸಂಬಂಧಿಕರ ಮನೆಗೆಂದು ತೆರಳಿದ್ದರು ಎನ್ನಲಾಗಿದೆ. ಸಾವಿಗೆ ಕಾರಣ ತಿಳಿದು ಬಂದಿಲ್ಲ. ಮೃತದೇಹವನ್ನು ಕಾಸರಗೋಡು ಜನರಲ್ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ.

- Advertisement -

Related news

error: Content is protected !!