- Advertisement -


- Advertisement -

ಕಾರ್ಕಳ: ಗೆಳೆಯರ ಬ್ಲಾಕ್ಮೇಲ್ಗೆ ನೊಂದಯುವಕನೋರ್ವ ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅ. 9ರಂದು ಸಂಜೆ ಬೆಳ್ಳಣ್ನ ಸೂರಜ್ ಲಾಡ್ಜ್ನಲ್ಲಿ ಸಂಭವಿಸಿದೆ. ನಿಟ್ಟೆ ಗ್ರಾಮದ ಪರಪ್ಪಾಡಿ ನಿವಾಸಿ ಅಭಿಷೇಕ್ ಆಚಾರ್ಯ(23) ಆತ್ಮಹತ್ಯೆಗೆ ಶರಣಾದ ಯುವಕ.ಅಭಿಷೇಕ್ ಆಚಾರ್ಯ ಮಂಗಳೂರಿನ ಖಾಸಗಿ ಕಂಪೆನಿಯಲ್ಲಿ ಕೆಲಸ ಮಾಡಿಕೊಂಡಿದ್ದು, ಸ್ಥಳೀಯ ಯುವತಿಯನ್ನು ಪ್ರೀತಿಸುತ್ತಿದ್ದ.
ಇವರಿಬ್ಬರು ಜೊತೆಗಿರುವ ಖಾಸಗಿ ವೀಡಿಯೋವನ್ನು ವೈರಲ್ ಮಾಡುವುದಾಗಿ ಅಭಿಷೇಕ್ ಆಚಾರ್ಯನ ಗೆಳೆಯರು ಬ್ಲಾಕ್ಮೇಲ್ ಮಾಡುತ್ತಿದ್ದು, ಇದರಿಂದ ಮಾನಸಿಕವಾಗಿ ನೊಂದ ಅಭಿಷೇಕ್ ಬ್ಲಾಕ್ ಮೇಲ್ ಮಾಡುತ್ತಿದ್ದ ನಾಲ್ವರು ಯುವಕರ ಹೆಸರನ್ನು ಡೆತ್ ನೋಟ್ನಲ್ಲಿ ಬರೆದಿಟ್ಟು ಲಾಡ್ಜ್ನಲ್ಲಿ ನೇಣಿಗೆ ಶರಣಾಗಿದ್ದಾನೆ ಎಂದು ತಿಳಿದು ಬಂದಿದೆ.ಕಾರ್ಕಳ ಗ್ರಾಮಾಂತರ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಡೆತ್ ನೋಟ್ ಹಾಗೂ ಆತನ ಮೊಬೈಲ್ ವಶಕ್ಕೆ ಪಡೆದಿದ್ದಾರೆ. ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.
- Advertisement -









