Friday, June 5, 2026
spot_imgspot_img
spot_imgspot_img

ದನಗಳ ತೊಳೆಯಲು ಹೋದ ರೈತ ಕಾಲು ಜಾರಿ ಬಿದ್ದು ನೀರು ಪಾಲು

- Advertisement -
- Advertisement -

ದನಗಳ ಮೈ ತೊಳೆಯಲು ನೀರಿಗಿಳಿದಿದ್ದ ರೈತನೋರ್ವ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ದುರ್ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರತಾಲೂಕಿನ ಒಡೇರಹಳ್ಳಿ ಸಮೀಪದ ಜಾಲಿಕಟ್ಟೆಯಲ್ಲಿ ಸಂಭವಿಸಿದೆ.

ಕುಮಾರ್ (44) ಮೃತ ರೈತ. ಒಡೇರಹಳ್ಳಿ ಸಮೀಪದ ಜಾಲಿಕಟ್ಟೆಯಲ್ಲಿ ದನಗಳ ಮೈ ತೊಳೆಯಲು ನೀರಿಗಿಳಿದಿದ್ದ ವೇಳೆ ಕಾಲು ಜಾರಿ ಬಿದ್ದು ಸಾವನಪ್ಪಿದ್ದಾರೆ ಎನ್ನಲಾಗಿದೆ. ದನಗಳು ಮನೆಗೆ ಹಿಂದಿರುಗಿ ಬಂದರೂ ಕುಮಾರ್ ಮನೆಗೆ ಬಾರದೇ ಇರುವುದರಿಂದ ಕುಟುಂಬಸ್ಥರು ಆತಂಕಗೊಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮೃತನಿಗೆ ಮೂರು ವರ್ಷಗಳ ಹಿಂದೆ ಮದುವೆಯಾಗಿದ್ದು, ಮಡದಿ ಆರು ತಿಂಗಳ ಗರ್ಭಿಣಿ ಎನ್ನಲಾಗಿದೆ.

ಸ್ಥಳಕ್ಕೆ ದೊಡ್ಡಬೆಳವಂಗಲ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ನೇತೃತ್ವದಲ್ಲಿ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿಯವರು ಸ್ಥಳಕ್ಕೆ ತೆರಳಿ ಹುಡುಕಾಟ ನಡೆಸಿ ಮೃತದೇಹವನ್ನು ಹೊರತೆಗೆದಿದ್ದಾರೆ. ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದುರ್ಘಟನೆ ಸಂಭವಿಸಿದೆ.

- Advertisement -

Related news

error: Content is protected !!