- Advertisement -
- Advertisement -



ನಗರದ ನೆಹರೂ ಮೈದಾನದ ಕ್ರಿಕೆಟ್ ಫೆವಿಲಿಯನ್ ಪಕ್ಕದ ಮೆಸ್ಕಾಂ ಕಚೇರಿಯ ಬಳಿ ಅಪರಿಚಿತ ವ್ಯಕ್ತಿಯ ಮೃತದೇಹವು ಜೂ.17ರಂದು ಪತ್ತೆಯಾಗಿದೆ.
ಅಂದು ಬೆಳಗ್ಗೆ 8ಕ್ಕೆ ಸುಮಾರು 40-45 ವರ್ಷದ ಪ್ರಾಯದ ಅಪರಿಚಿತ ವ್ಯಕ್ತಿ ಬಿದ್ದುಕೊಂಡಿದ್ದು, ಆತನನ್ನು ಆ್ಯಂಬುಲೆನ್ಸ್ ಮೂಲಕ ವೆನ್ಹಾಕ್ಗೆ ದಾಖಲಿಸಲಾಗಿತ್ತು. ಪರೀಕ್ಷಿಸಿದ ವೈದ್ಯರು ವ್ಯಕ್ತಿ ಮೃತಪಟ್ಟಿರುವುದನ್ನು ದೃಢೀಕರಿಸಿದ್ದಾರೆ.ಜೂ.16ರ ರಾತ್ರಿ ಈ ವ್ಯಕ್ತಿಯನ್ನು ಯಾರೋ ಕೊಲೆ ಮಾಡಿ ಹೋಗಿರಬಹುದು ಅಥವಾ ಇನ್ನಾವುದೋ ಕಾರಣದಿಂದ ಮೃತಪಟ್ಟಿರಬಹುದು ಎಂದು ಶಂಕೆ ವ್ಯಕ್ತಪಡಿಸಲಾಗಿದೆ. ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಮೃತದೇಹವನ್ನು ವೆಸ್ಲಾಕ್ ಆಸ್ಪತ್ರೆಯ ಶವಾಗಾರದಲ್ಲಿಡಲಾಗಿದ್ದು, ವಾರಸುದಾರರು ಇದ್ದಲ್ಲಿ ಪೊಲೀಸರನ್ನು ಸಂಪರ್ಕಿಸಬಹುದಾಗಿದೆ.
- Advertisement -