- Advertisement -
- Advertisement -



ಧರ್ಮಸ್ಥಳ: ಮಹಿಳೆಯೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧರ್ಮಸ್ಥಳ ಗ್ರಾಮದ ಮುಳಿಕ್ಕಾರು ಎಂಬಲ್ಲಿ ನಡೆದಿದೆ.
ಮೃತಪಟ್ಟ ಮಹಿಳೆಯನ್ನು ಮುಳಿಕ್ಕಾರು ಗ್ರಾಮ ನಿವಾಸಿ ವಿನುತ ಎಂದು ಗುರುತಿಸಲಾಗಿದೆ.
ಆ.6 ರಂದು ತಮ್ಮ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಧರ್ಮಸ್ಥಳದ ಅಂಗಡಿಯಲ್ಲಿ ವಿನುತ ಅವರು ಕೆಲಸ ಮಾಡುತ್ತಿದ್ದರು. ಮೃತರು ಪತಿ ಸಂದೇಶ್‌ರನ್ನು ಅಗಲಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -








