Sunday, June 28, 2026
spot_imgspot_img
spot_imgspot_img

ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ವಿದ್ಯುತ್ ಪ್ರವಹಿಸಿ ಯುವಕ ಮೃತ್ಯು

- Advertisement -
- Advertisement -

ವಿಜಯಪುರ: ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ವಿದ್ಯುತ್ ಶಾಕ್ ಹೊಡೆದು ಯುವಕ ಮೃತಪಟ್ಟ ಘಟನೆ ವಿಜಯಪುರ ನಗರದ ಗಾಂಧಿಚೌಕ್ ವೃತ್ತದ ಬಳಿಯ ಟಾಂಗಾ ಸ್ಟ್ಯಾಂಡ್ ಬಳಿ ನಡೆದಿದೆ.ಮೃತ ಯುವಕ ವಿಜಯಪುರ ನಗರದ ಡೋಬಲೆ ಗಲ್ಲಿ ನಿವಾಸಿ ಶುಭಂ ಸಂಕಳ (21) ಎಂದು ತಿಳಿದು ಬಂದಿದೆ.

ಗಣೇಶನ ಮೂರ್ತಿ ಸಾಗಲು ಕೋಲಿನಿಂದ ವಿದ್ಯುತ್ ತಂತಿ ಮೇಲೆತ್ತುವ ವೇಳೆ ವಿದ್ಯುತ್ ಪ್ರವಹಿಸಿ ಯುವಕ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.ಘಟನೆ ನಡೆದ ತಕ್ಷಣ ಎಲ್ಲ ಗಣೇಶನ ಮೂರ್ತಿಗಳನ್ನು ಕಳುಹಿಸಿದ ಪೊಲೀಸರು, ಸ್ಥಳದಲ್ಲಿ ಮುನ್ನೆಚ್ಚರಿಕೆ ವಹಿಸಿದ್ದಾರೆ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!