Sunday, September 6, 2026
spot_imgspot_img
spot_imgspot_img

ಉಡುಪಿ: ಕ್ರೇನ್ ಹರಿದು ಯುವಕ ಮೃತ್ಯು

- Advertisement -
- Advertisement -

ಕುಂದಾಪುರ: ಕುಂದಾಪುರ ತಾಲೂಕಿನ ತೆಕ್ಕಟ್ಟೆ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕ್ರೇನ್ ಹರಿದು ಯುವಕನೋರ್ವ ಮೃತಪಟ್ಟ ಘಟನೆ ಬುಧವಾರ ಸಂಭವಿಸಿದೆ.ಮೃತನನ್ನು ತೆಕ್ಕಟ್ಟೆ ಗ್ರಾಮದ ಅಭಿಷೇಕ್ ಪೂಜಾರಿ ಎಂದು ಗುರುತಿಸಲಾಗಿದೆ.ಹೆದ್ದಾರಿಯಲ್ಲಿ ಯೂಟರ್ನ್ ತೆಗೆದುಕೊಳ್ಳುವ ಸ್ಥಳದಲ್ಲಿ ಖಾಸಗಿ ಬಸ್ ಪ್ರಯಾಣಿಕರನ್ನು ಹತ್ತಿಸಿ ಇಳಿಸುತ್ತಿತ್ತು. ಈ ಸಂದರ್ಭ ಬಸ್ ಪಕ್ಕದಲ್ಲಿ ದ್ವಿಚಕ್ರ ವಾಹನ ಸವಾರ ತಿರುವು ತೆಗೆದುಕೊಳ್ಳಲು ಮುಂದಾಗಿದ್ದಾನೆ.

ಆಗ ಏಕಾಏಕಿ ಬಸ್ ಚಲಿಸಿದ್ದರಿಂದ ಆಯತಪ್ಪಿ ದ್ವಿಚಕ್ರ ವಾಹನ ಸವಾರ ರಸ್ತೆಗೆ ಬಿದ್ದಿದ್ದಾನೆ ಎಂದು ತಿಳಿದು ಬಂದಿದೆಸವಾರ ಬೀಳುತ್ತಿದ್ದಂತೆ ಆತನ ಮೇಲೆ ಕ್ರೇನ್ ಹರಿದಿದೆ. ಕೂಡಲೇ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಯುವಕ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.ಈ ಕುರಿತು ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!