




ಶಿವಮೊಗ್ಗ: ಕಾಲೇಜಿನಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಯೊಬ್ಳಳ ಶವ ಶಿವಮೊಗ್ಗದ ಹಾಸ್ಟೆಲ್ ಟೆರಸ್ ಮೇಲೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ವರದಿಯಾಗಿದೆಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ ಭದ್ರಾವತಿ ತಾಲೂಕಿನ ದೊಡ್ಡೇರಿ ಗಂಗೂರು ಗ್ರಾಮದ ನಿವಾಸಿ ಟಿ.ಸಿ.ವನೀಷಾ (21) ಎಂದು ತಿಳಿದು ಬಂದಿದೆ.ವನೀಷಾ ಶಿವಮೊಗ್ಗದ ಖಾಸಗಿ ಕಾಲೇಜಿನಲ್ಲಿ ತೃತೀಯ ಬಿಎಸ್ಸಿ ವ್ಯಾಸಂಗ ಮಾಡುತ್ತಿದ್ದಳು. ಇಂದು ಬೆಳಗ್ಗೆ ಕೋಟೆ ರಸ್ತೆ ಬಳಿಯಿರುವ ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕಿಯರ ಹಾಸ್ಟೆಲ್ಲಿನ ಟೆರಸ್ ಮೇಲೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ ಎಂದು ತಿಳಿದು ಬಂದಿದೆ.
ಸುದ್ದಿ ತಿಳಿಯುತ್ತಿದ್ದಂತೆಯೇ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.ಹಾಸ್ಟೆಲ್ ನ ಇತರೆ ವಿದ್ಯಾರ್ಥಿನಿಗಳಿಂದ ಮಾಹಿತಿ ಪಡೆಯುತ್ತಿದ್ದಾರೆ. ಮೃತದೇಹವನ್ನು ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ.ಈ ಕುರಿತು ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.








