Friday, June 5, 2026
spot_imgspot_img
spot_imgspot_img

ವಿಟ್ಲ: ಖಾಸಗಿ ಬಸ್ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ದ್ವಿಚಕ್ರ ವಾಹನ ಸವಾರ ಮೃತ್ಯು ..!

- Advertisement -
- Advertisement -

ವಿಟ್ಲ: ದ್ವಿಚಕ್ರ ವಾಹನ ಹಾಗೂ ಖಾಸಗಿ ಬಸ್ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಆಗಸ್ಟ್ 12 ಮಂಗಳವಾರ ವಿಟ್ಲ-ಸಾಲೆತ್ತೂರು-ಮುಡಿಪು ರಸ್ತೆಯ ಕಟ್ಟತ್ತಿಲ ಎಂಬಲ್ಲಿ ನಡೆದಿದ್ದು, ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಇಂದು ಸಂಜೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ

ಮೃತ ಸವಾರನನ್ನು ಕಟ್ಟತ್ತಿಲ ನಿವಾಸಿ ಮುಝಾಂಬಿಲ್(30) ಎಂದು ಗುರುತಿಸಲಾಗಿದೆ.

ಘಟನೆಯಲ್ಲಿ ದ್ವಿಚಕ್ರ ವಾಹನಕ್ಕೆ ಹಾನಿಯಾಗಿದ್ದು, ಸವಾರ ಮುಝಂಬಿಲ್ ಗಂಭೀರ ಗಾಯಗೊಂಡಿದ್ದು, ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ. ವಿಟ್ಲದಿಂದ ಮುಡಿಪು ತೆರಳುತ್ತಿದ್ದ ಖಾಸಗಿ ಬಸ್ ಹಾಗೂ ಮೆದು ಕಡೆ ತೆರಳುತ್ತಿದ್ದ ಆಕ್ಟಿವಾ ನಡುವೆ ಈ ಅಪಘಾತ ಸಂಭವಿಸಿದೆ.

- Advertisement -

Related news

error: Content is protected !!