- Advertisement -
- Advertisement -


ತಿರುಪತಿ: ವೈಕುಂಠ ಏಕಾದಶಿ ಪ್ರಯುಕ್ತ ತಿರುಪತಿಯಲ್ಲಿ ಜನಸಾಗರವೇ ಹರಿದು ಬರುತ್ತಿದೆ. ಈ ಮಧ್ಯೆ ತಿರುಪತಿಯಲ್ಲಿ ವೈಕುಂಠ ದ್ವಾರ ದರ್ಶನದ ಟಿಕೆಟ್ ಪಡೆಯುವ ವೇಳೆ ಹೆಚ್ಚಾದ ಭಕ್ತಸಾಗರದಿಂದ ಕಾಲ್ತುಳಿತ ಉಂಟಾಗಿ 6 ಭಕ್ತರು ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ. ಇನ್ನು ಈ ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗಬಹುದು ಎನ್ನಲಾಗಿದೆ.ಇದೇ ಜನವರಿ 10 ರಂದು ವೈಕುಂಠ ಏಕಾದಶಿ ನಡೆಯಲಿದೆ.
ಈ ವೇಳೆ ವಿಶ್ವ ಪ್ರಸಿದ್ಧ ತಿರುಪತಿ ದೇವಸ್ಥಾನದಲ್ಲಿ ವೈಕುಂಠ ದ್ವಾರ ತೆರೆಯಲಿದ್ದು, ತಿಮ್ಮಪ್ಪನ ಆಲಯದಲ್ಲಿ ಸಡಗರ ಮನೆ ಮಾಡಿರುತ್ತೆ.ಆದ್ರೆ ಏಕಾದಶಿಗೂ ಮುನ್ನವೇ ತಿರುಪತಿಯಲ್ಲಿ ದಾರುಣ ಘಟನೆ ನಡೆದುಹೋಗಿದೆ. ಇದಕ್ಕಾಗಿ ಈಗಲೇ ಲಕ್ಷಗಟ್ಟಲೆ ಭಕ್ತರು ಕಾದು ಕುಳಿತಿದ್ದಾರೆ. ಈ ವೇಳೆ ವೈಕುಂಠ ದ್ವಾರದ ದರ್ಶನ ಟಿಕೆಟ್ ಪಡೆಯಲು ಭಕ್ತರ ಸಂಖ್ಯೆ ಹೆಚ್ಚಾಗಿದ್ದರಿಂದ ಕೌಂಟರ್ ಬಳಿ ಬುಧವಾರ ಕಾಲ್ತುಳಿತ ಸಂಭವಿಸಿ 6 ಮಂದಿ ಭಕ್ತರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
- Advertisement -








