Saturday, May 18, 2024
spot_imgspot_img
spot_imgspot_img

ಸರ್ಕಾರಿ ಆಸ್ಪತ್ರೆ ವೈದ್ಯೆ ಅನುಮಾನಾಸ್ಪದ ಸಾವು

- Advertisement -G L Acharya panikkar
- Advertisement -

ಸರ್ಕಾರಿ ಆಸ್ಪತ್ರೆಯಲ್ಲಿ ಅರಿವಳಿಕೆ ತಜ್ಞ ವೈದ್ಯರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ತಮಿಳುನಾಡು ಮೂಲದ ಡಾ. ಸಿಂಧುಜಾ (28) ಅನುಮಾನಾಸ್ಪದವಾಗಿ ಸಾವಿಗೀಡಾಗಿರುವ ಘಟನೆ ಕೊಳ್ಳೇಗಾಲದಲ್ಲಿ ನಡೆದಿದೆ.

ಡಾ. ಸಿಂಧುಜಾ ಅವರು ಕೊಳ್ಳೇಗಾಲ ಉಪವಿಭಾಗ ಆಸ್ಪತ್ರೆಯಲ್ಲಿ ಅರಿವಳಿಕೆ ತಜ್ಞರಾಗಿ ಕಳೆದ ಒಂದು ವರ್ಷದಿಂದ ಕೆಲಸ ಮಾಡುತ್ತಿದ್ದು,ಮಹದೇಶ್ವರ ಕಾಲೇಜು ರಸ್ತೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು.

ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ವೈದ್ಯೆಯ ಶವದ ಬಳಿ ಸಿರೆಂಜ್ ಪತ್ತೆಯಾಗಿದೆ. ಜನವರಿ 2 ತಾರೀಕಿಗೆ ಡಾ. ಸಿಂಧುಜಾ ಮದುವೆ ನಿಶ್ಚಯವಾಗಿತ್ತು.
ತಮಿಳುನಾಡಿನವರಾದ ಸಿಂಧುಜಾ ಎಂಬಿಬಿಎಸ್‌ ಕೋರ್ಸ್‌ ಮಾಡಿದ್ದರು. ಬಳಿಕ ಸ್ನಾತಕೋತ್ತರ ಪದವಿಗೆ ಸೇರಿದ್ದು, ಸ್ನಾತಕೋತ್ತರ ಪದವಿ ಶಿಕ್ಷಣದ ಭಾಗವಾಗಿ ಅವರು ಕೊಳ್ಳೇಗಾಲದ ಸರ್ಕಾರಿ ಆಸ್ಪತ್ರೆಯಲ್ಲಿ ಅರಿವಳಿಕೆ ವಿಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು.
ಆಸ್ಪತ್ರೆಯಲ್ಲಿ ಎಲ್ಲ ವೈದ್ಯರು ಹಾಗೂ ಸಿಬ್ಬಂದಿ ಜೊತೆ ಉತ್ತಮ ಬಾಂಧವ್ಯ ಹೊಂದಿದ್ದರು. ಸ್ಥಳಕ್ಕೆ ಕೊಳ್ಳೇಗಾಲ ಪಟ್ಟಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Related news

error: Content is protected !!