Sunday, September 13, 2026
spot_imgspot_img
spot_imgspot_img

ಪ್ಯಾರಾಚೂಟ್  ತೆರೆಯದೇ 1500 ಅಡಿ ಎತ್ತರದಿಂದ ಬಿದ್ದು ಕನ್ನಡಿಗ ಸಾವು!

- Advertisement -
- Advertisement -

ಆಗ್ರಾದಲ್ಲಿ ನಡೆದ ಪ್ಯಾರಾಚೂಟ್ ತರಬೇತಿ ವೇಳೆ ಕರ್ನಾಟಕ ಮೂಲದ ವಾಯುಪಡೆಯ ವಾರಂಟ್ ಅಧಿಕಾರಿ ಮಂಜುನಾಥ್‌ ಪ್ರಾಣ ಕಳೆದುಕೊಂಡ ಆಘಾತಕಾರಿ ಘಟನೆ ನಡೆದಿದೆ.

ವಾರಂಟ್ ಅಧಿಕಾರಿ ಮಂಜುನಾಥ್, ವಿಂಗ್ ಕಮಾಂಡರ್ ರೋಹಿತ್ ದಹಿಯಾ ಸೇರಿದಂತೆ 12ತರಬೇತಿದಾರರು ಬೆಳಿಗ್ಗೆ 8:30ಕ್ಕೆ ವಾಯುಪಡೆಯ ವಿಮಾನದಿಂದ ತರಬೇತಿಯ ಭಾಗವಾಗಿ ಕೆಳಗೆ ಹಾರಿದ್ದರು.ಈ ಪೈಕಿ 11 ಮಂದಿ ಸುರಕ್ಷಿತವಾಗಿ ಇಳಿದಿದ್ದರು. ಆದರೆ ಮಂಜುನಾಥ್ ಮಾತ್ರ ಕೆಳಗಿಳಿದಿರಲಿಲ್ಲ. ಈ ಹಿನ್ನೆಲೆಯಲ್ಲಿ ಸಮೀಪದ ಪ್ರದೇಶಗಳಲ್ಲಿ ತಪಾಸಣೆ ನಡೆಸಿದಾಗ ಗೋಧಿ ಹೊಲದಲ್ಲಿ ಮಂಜುನಾಥ್ ಶವ ಪತ್ತೆಯಾಗಿದೆ.ಪ್ರಾಥಮಿಕ ತನಿಖೆ ವೇಳೆ ಪ್ಯಾರಾಚೂಟ್ ಬಿಚ್ಚಿಕೊಳ್ಳದೇ ಅವರು 1500 ಅಡಿ ಎತ್ತರದಿಂದ ಕೆಳಗೆ ಬಿದ್ದಿರುವುದು ಕಂಡುಬಂದಿದೆ. ಸಾಮಾನ್ಯವಾಗಿ ವಿಮಾನದಿಂದ ಹಾರಿದ 5 ಸೆಕೆಂಡ್‌ನಲ್ಲಿ ಪ್ಯಾರಾಚೂಟ್ ತಂತಾನೆ ಬಿಚ್ಚಿಕೊಳ್ಳಬೇಕು. ಅದು ಆಗದೇ ಹೋದಲ್ಲಿ, ತುರ್ತು ಸಂದರ್ಭಕ್ಕೆಂದು ಮೀಸಲಿಟ್ಟ ಇನ್ನೊಂದು ಪ್ಯಾರಾಚೂಟ್ ಅನ್ನು ಸ್ವತಃ ತೆರೆಯಬೇಕಾಗುತ್ತದೆ.ಆದರೆ ಅದು ಕೂಡಾ ತೆರೆಯದೇ ಇದ್ದ ಪರಿಸ್ಥಿತಿಯಲ್ಲಿ ಘಟನಾ ಸ್ಥಳದಲ್ಲಿ ಪತ್ತೆಯಾಗಿದೆ.ಈ ಹಿನ್ನೆಲೆಯಲ್ಲಿ ಘಟನೆ ಕುರಿತು ತನಿಖೆಗೆ ಆದೇಶಿಸಲಾಗಿದೆ. ಮಂಜುನಾಥ್ ಕರ್ನಾಟಕದವರಾಗಿದ್ದು, ಆಗ್ರಾ ಏರ್ಫೋಸ್್ರ ಬೇಸ್‌ನಲ್ಲಿ ಕರ್ತವ್ಯದಲ್ಲಿದ್ದರು. ಮರಣೋತ್ತರ ಪರೀಕ್ಷೆ ಸೇರಿದಂತೆ ಅಗತ್ಯ ಕಾನೂನು ಪ್ರಕ್ರಿಯೆಗಳನ್ನು ನಡೆಸಲಾಗಿದೆ ಎಂದು ಮಲ್ಪುರ ಪೊಲೀಸ್‌ ಠಾಣೆ ಇನ್ಸ್‌ಪೆಕ್ಟರ್ ಪ್ರಮೋದ್ ಶರ್ಮಾ ತಿಳಿಸಿದ್ದಾರೆ.

- Advertisement -

Related news

error: Content is protected !!