Sunday, June 29, 2025
spot_imgspot_img
spot_imgspot_img

ವರುಣನ ಆರ್ಭಟಕ್ಕೆ ಮನೆಯ ಗೋಡೆ ಕುಸಿದು ಬಾಲಕಿ ಸಾವು

- Advertisement -
- Advertisement -

ಭಾರೀ ಮಳೆಯಿಂದಾಗಿ ಮನೆಯ ಗೋಡೆ ಕುಸಿದು ಬಾಲಕಿ ಸಾವನ್ನಪ್ಪಿರುವ ಘಟನೆ ಬೀದರ್‌ ಜಿಲ್ಲೆಯ ಭಾಲ್ಕಿ ತಾಲೂಕಿನ ಬಾಜೋಳಗಾ ಗ್ರಾಮದಲ್ಲಿ ನಡೆದಿದೆ

ಸಂಧ್ಯಾರಾಣಿ ಸಂಜುಕುಮಾರ ಕಾಂಬಳೆ (8) ಮೃತ ಬಾಲಕಿ. ಎರಡನೇ ತರಗತಿಯಲ್ಲಿ ಓದುತ್ತಿದ್ದ ಬಾಲಕಿ ಆಟ ಆಡುವಾಗ ಪಕ್ಕದ ಮನೆಯ ಗೋಡೆ ಕುಸಿದು ಬಿದ್ದ ಪರಿಣಾಮ ಆಕೆಯ ತಲೆಗೆ ತೀವ್ರವಾಗಿ ಗಾಯವಾಗಿದ್ದು,ಗಾಯಾಳು ಸಂಧ್ಯಾರಾಣಿಯನ್ನು ಕೂಡಲೇ ಹತ್ತಿರದ ಆಸ್ಪತ್ರೆಗೆ ಸಾಗಿಸಲಾಯಿತು.

ಆದರೆ, ಆಕೆ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದು, ಘಟನಾ ಸ್ಥಳಕ್ಕೆ ಪಂಚಾಯತ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Related news

error: Content is protected !!