- Advertisement -
- Advertisement -




ಉಡುಪಿ: ಅಪಾರ್ಟ್‌ಮೆಂಟ್ ವೊಂದರ 14ನೇ ಮಹಡಿಯಿಂದ ಬಿದ್ದು ವ್ಯಕ್ತಿಯೊಬ್ಬ ಸಾವನ್ನಪ್ಪಿದ ಘಟನೆ ಮಂಗಳವಾರ (ಫೆ.25) ಬ್ರಹ್ಮಗಿರಿಯಲ್ಲಿ ಮಧ್ಯಾಹ್ನ ನಡೆದಿದೆ.
ಲೇಖಿರಾಜ್ (29) ಮೃತರು. ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಅವರು ಇದಕ್ಕಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು ಎನ್ನಲಾಗಿದೆ.ಘಟನೆಗೆ ನಿಖರ ಕಾರಣ ಏನೆಂದು ಇನ್ನಷ್ಟೇ ತಿಳಿದುಬರಬೇಕಿದೆ. ಲೇಖಿರಾಜ್ ಅವರು ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ ಅಧ್ಯಕ್ಷ ವೈ.ಸುಧೀರ್ ಅವರ ಪುತ್ರ.ಘಟನಾ ಸ್ಥಳಕ್ಕೆ ಉಡುಪಿ ನಗರ ಪೊಲೀಸ್ ಠಾಣೆಯ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸರು ಈ ನಿಟ್ಟಿನಲ್ಲಿ ತನಿಖೆಯನ್ನು ಮುಂದುವರಿಸಿದ್ದಾರೆ. ಪ್ರಕರಣ ಇನ್ನಷ್ಟೇ ದಾಖಲಾಗಬೇಕಿದೆ ಎಂದು ವರದಿ ತಿಳಿಸಿದೆ.
- Advertisement -








