Wednesday, February 28, 2024
spot_imgspot_img
spot_imgspot_img

ಮೈಸೂರು ದಸರಾದಲ್ಲಿ 8 ಬಾರಿ ಅಂಬಾರಿ ಹೊತ್ತಿದ್ದ ಅರ್ಜುನ ಸಾವು..!

- Advertisement -G L Acharya panikkar
- Advertisement -

ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ 8 ಬಾರಿ ಅಂಬಾರಿ ಹೊತ್ತಿದ್ದ ಅರ್ಜುನ ಸಾವನ್ನಪ್ಪಿದ ಘಟನೆ ನಡೆದಿದೆ. ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಯಸಳೂರು ಬಳಿ ಕಾಡಾನೆ ಸೆರೆ ಹಿಡಿದು ಸ್ಥಳಾಂತರ ಮಾಡುವ ಕಾರ್ಯಾಚರಣೆ ವೇಳೆ ಹೋರಾಡಿದ ಅರ್ಜುನ ಪ್ರಾಣ ಬಿಟ್ಟಿದ್ದಾನೆ.

ಅರಣ್ಯ ಇಲಾಖೆ ಸಿಬ್ಬಂದಿ ಇಂದು ನಾಲ್ಕು ಸಾಕಾನೆಗಳೊಂದಿಗೆ ಕಾಡಾನೆಗಳ ಕಾರ್ಯಾಚರಣೆ ಆರಂಭಿಸಿತ್ತು. ಕಾಡಾನೆಗೆ ಅರವಳಿಕೆ ಚುಚ್ಚುಮದ್ದು ನೀಡುವ ಕಾರ್ಯಾಚರಣೆ ವೇಳೆ ಅರ್ಜುನನ ಮೇಲೆ ಒಂಟಿಸಲಗ ಅಟ್ಯಾಕ್ ಮಾಡಿದೆ.

ಒಂಟಿಸಲಗ ದಾಳಿ ಮಾಡುತ್ತಿದ್ದಂತೆ ಉಳಿದ ಮೂರು ಸಾಕಾನೆಗಳು ಓಡಿ ಹೋಗಿವೆ. ಕೊನೆಗೆ ಒಂಟಿಸಲಗದ ಜೊತೆ ಸಾಕಾನೆ ಅರ್ಜುನ ಒಂಟಿಯಾಗಿ ಕಾಳಗಕ್ಕಿಳಿದಿದ್ದ. ಈ ಮದಗಜಗಳ ಕಾಳಗದಲ್ಲಿ ಅರ್ಜುನ ಸಾವನ್ನಪ್ಪಿದ್ದಾನೆ. ಈ ಎರಡು ಆನೆಗಳು ಕಾಳಗಕ್ಕೆ ಬೀಳುತ್ತಿದ್ದಂತೆ ಅರ್ಜುನನ ಮೇಲಿನಿಂದ ಮಾವುತ ಇಳಿದು ಓಡಿದ್ದಾರೆ. ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Related news

error: Content is protected !!