Tuesday, April 30, 2024
spot_imgspot_img
spot_imgspot_img

ಆನ್‌ ಲೈನ್‌ ಗೇಮಿಂಗ್‌ : ಸಿಇಒ ಸಾವು

- Advertisement -G L Acharya panikkar
- Advertisement -

ಆನ್‌ಲೈನ್‌ ಗೇಮಿಂಗ್‌ ಗೀಳಿಗೆ ಬಿದ್ದ ದಂಡು ಮಂಡಳಿ ಸಿಇಒ ತಮ್ಮ ಜೀವವನ್ನೇ ಕಳೆದುಕೊಂಡಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿ ದಂಡು ಮಂಡಳಿ ಸಿಇಒ ಕೆ.ಆನಂದ ಮೃತ ದುರ್ದೈವಿ.

ಮೊದಮೊದಲು ಇದು ಕೊಲೆಯೋ, ಆತ್ಮಹತ್ಯೆಯೋ ಎಂಬ ಹಲವು ಅನುಮಾನಗಳು ಹುಟ್ಟಿಕೊಂಡಿತ್ತು. ಆದರೆ ತನಿಖೆ ನಡೆಸಿದ ಪೊಲೀಸರಿಗೆ ನಿಗೂಢ ಸಾವಿನ ರಹಸ್ಯ ಬಯಲಾಗಿದೆ.

ಬೆಳಗಾವಿ ಕ್ಯಾಂಪ್ ಪ್ರದೇಶದಲ್ಲಿರುವ ಸರ್ಕಾರಿ ನಿವಾಸದಲ್ಲಿ ಕೆ.ಆನಂದ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಮಿಳುನಾಡು ಮೂಲದವರಾದ ಆನಂದ್‌ ಕಳೆದ ಒಂದೂವರೆ ವರ್ಷಗಳಿಂದ ದಂಡು ಮಂಡಳಿ ಸಿಇಒ ಆಗಿ ಸೇವೆ ಸಲ್ಲಿಸುತ್ತಿದ್ದರು. ಆನಂದ ಈ ನಡುವೆ ಆನ್‌ಲೈನ್‌ ಹಾಗೂ ಆಫ್‌ಲೈನ್ ಗೇಮ್‌ಗಾಗಿ ಲಕ್ಷಾಂತರ ರೂ. ಕೈ ಸಾಲ ಮಾಡಿಕೊಂಡಿದ್ದರು. ಸಾಲದ ಹೊರೆಗೆ ನೊಂದು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ.ತೀರಿಸಲಾಗದಷ್ಟು ಸಾಲ ಮಾಡಿಕೊಂಡಿದ್ದಾಗಿ ಡೆತ್‌ ನೋಟ್‌ನಲ್ಲಿ ಉಲ್ಲೇಖಿಸಿದ್ದಾರೆ.

ಎರಡು ದಿನಗಳ ಹಿಂದೆಯೇ ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನ.25ರಂದು ಬಾಗಿಲು ತಟ್ಟಿದ್ದರೂ ತೆರೆಯದೆ ಇದ್ದಾಗ ಸಿಬ್ಬಂದಿ ಆತಂಕಗೊಂಡು ಕ್ಯಾಂಪ್ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.ಸ್ಥಳಕ್ಕಾಗಮಿಸಿದ ಪೊಲೀಸರು ಬಾಗಿಲು ಹೊಡೆದು ಒಳ ನುಗ್ಗಿದಾಗ ಆನಂದ್ ಶವವಾಗಿ ಪತ್ತೆಯಾಗಿದ್ದಾರೆ.

ದಂಡು ಮಂಡಳಿಯ ಬಗ್ಗೆ ಹಲವಾರು ದೂರುಗಳು ಬಂದಿದ್ದವು. ಈ ಹಿನ್ನೆಲೆಯಲ್ಲಿ ಕಳೆದ ನ. 19 ರಂದು ದಂಡು ಮಂಡಳಿಯ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದರು. ಇದಾದ ಬಳಿಕ ಸರ್ಕಾರಿ ನಿವಾಸದಲ್ಲಿ ಒಬ್ಬರೇ ವಾಸವಿದ್ದ ಆನಂದ್‌, ಬೆಡ್ ರೂಮ್‌ನಲ್ಲಿ ಮೃತದೇಹ ಪತ್ತೆ ಆಗಿತ್ತು.

ವಿಷಯ ತಿಳಿಯುತ್ತಿದ್ದಂತೆ ಬೆಳಗಾವಿ ನಗರದ ಕಾನೂನು ಸುವ್ಯವಸ್ಥೆ ಡಿಸಿಪಿ ರೋಹನ್ ಜಗದೀಶ ಭೇಟಿ ನೀಡಿ ಪರಿಶೀಲನೆ ನಡೆಸಿದರು.ವೈದ್ಯಕೀಯ ತಪಾಸಣೆ ನಡೆಸಿ, ಹಿರಿಯ ಕ್ರೈಂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆನಂದ್ ಅವರ ಕುಟುಂಬಸ್ಥರಿಗೂ ಮಾಹಿತಿ ನೀಡಲಾಗಿದೆ. ಮರಣೋತ್ತರ ಪರೀಕ್ಷೆಗಾಗಿ ಬೆಳಗಾವಿ ಜಿಲ್ಲಾ ಆಸ್ಪತ್ರೆಗೆ ಮೃತದೇಹವನ್ನು ರವಾನೆ ಮಾಡಲಾಗಿದೆ ಕೆ.ಆನಂದ್ ಅವರ ರೂಮ್‌ನಲ್ಲಿ ಡೆತ್ ನೋಟ್ ಸಿಕ್ಕಿದೆ. ಬೆಡ್ ಮೇಲೆ ವಿಷದ ಬಾಟಲ್ ಸಿಕ್ಕಿದೆ. ಮೂಗಿನಿಂದ ರಕ್ತ ಬಂದಿದ್ದು, ಮೇಲ್ನೋಟಕ್ಕೆ ಇದು ಆತ್ಮಹತ್ಯೆಯಂತೆ ಕಂಡು ಬಂದಿದೆ.

- Advertisement -

Related news

error: Content is protected !!