Thursday, June 18, 2026
spot_imgspot_img
spot_imgspot_img

ಕರೂರು ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 41ಕ್ಕೆ ಏರಿಕೆ

- Advertisement -
- Advertisement -

ಚೆನ್ನೈ: ಕರೂರಿನ ರ‍್ಯಾಲಿ ವೇಳೆ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 41ಕ್ಕೆ ಏರಿಕೆಯಾಗಿದೆ.

ಕಾಲಿವುಡ್ ನಟ, ‘ತಮಿಳಿಗ ವೆಟ್ರಿ ಕಳಗಂ’ ಪಕ್ಷದ ಮುಖ್ಯಸ್ಥ ದಳಪತಿ ವಿಜಯ್ ಸೆ.27ರಂದು ನಡೆಸಿದ ರ‍್ಯಾಲಿಯಲ್ಲಿ ಕಾಲ್ತುಳಿತ ಉಂಟಾಗಿತ್ತು. ಈ ಬಗ್ಗೆ ಸ್ವತಂತ್ರ ತನಿಖೆ ಅಥವಾ ಸಿಬಿಐ ತನಿಖೆ ನಡೆಸಬೇಕೆಂದು ವಿಜಯ್ ಸಲ್ಲಿಸಿದ್ದ ಅರ್ಜಿ ಇಂದು ವಿಚಾರಣೆ ನಡೆಯಲಿದೆ.

ವಿಜಯ್ ಅವರ ಪರವಾಗಿ ತಮಿಳಗ ವೆಟ್ರಿ ಕಳಗಂ ಪಕ್ಷದ ಕಾನೂನು ತಂಡ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಮದ್ರಾಸ್ ಹೈಕೋರ್ಟ್ನಲ್ಲಿ ನಡೆಯಲಿದೆ. ಈ ನಡುವೆ ರ‍್ಯಾಲಿಗಳಿಗೆ ಇನ್ಮುಂದೆ ಪ್ರೋಟೋಕಾಲ್ ತಯಾರಿಸುವವರೆಗೆ ನಟ ವಿಜಯ್ ರ‍್ಯಾಲಿಗೂ ಅನುಮತಿ ನೀಡದಂತೆ ಅರ್ಜಿ ಸಲ್ಲಿಸಿದೆ. ಈ ಅರ್ಜಿ ಕೂಡ ಇಂದೇ ವಿಚಾರಣೆ ನಡೆಯುವ ಸಾಧ್ಯತೆ ಇದೆ.

“ಕರೂರಿನಲಿ ನಡೆದ ಘಟನೆ ಹಿಂದೆ ಕ್ರಿಮಿನಲ್ ಪಿತೂರಿ ಇದೆ. ಆದ್ದರಿಂದ ನಾವು ರಾಜಕೀಯ ಸಂಸ್ಥೆಯ ಮೂಲಕ ತನಿಖೆ ಮಾಡೋದು ಬೇಡ. ಸ್ವತಂತ್ರ ಸಂಸ್ಥೆ ಮೂಲಕ ತನಿಖೆ ನಡೆಸುವಂತೆ ಕೋರಿ ಅರ್ಜಿ ಸಲ್ಲಿಸಿದ್ದೇವೆ. ನ್ಯಾಯಾಲಯವೇ ವಿಶೇಷ ತನಿಖಾ ತಂಡವನ್ನ ರಚಿಸಬೇಕು. ಇಲ್ಲದಿದ್ದರೆ ಪ್ರಕರಣವನ್ನ ಸಿಬಿಐಗೆ ವಹಿಸಬೇಕು ಎಂದು ಟಿವಿಕೆ ಪಕ್ಷದ ವಕೀಲ ಅರಿವಳಗನ್ ಆಗ್ರಹಿಸಿದ್ದಾರೆ.

ಈಗಾಗಲೇ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಪ್ರಾಥಮಿಕ ತನಿಖೆ ಆರಂಭಿಸಿದ್ದಾರೆ. ಕಾಲ್ತುಳಿತದ ಸ್ಥಳದಲ್ಲಿರುವ ಎಲ್ಲಾ ಸಿಸಿಕ್ಯಾಮರಾ, ಡ್ರೋನ್ ವಿಡಿಯೋ ಹಾಗೂ ಮೊಬೈಲ್‌ಗಳಲ್ಲಿ ರೆಕಾರ್ಡ್ ಮಾಡಿದ್ದ ವಿಡಿಯೋಗಳನ್ನ ಪೊಲೀಸರು ವಶಕ್ಕೆ ಪಡೆದು ಪರಿಶೀಲನೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!