Wednesday, July 22, 2026
spot_imgspot_img
spot_imgspot_img

ನದಿಯಲ್ಲಿ ಮುಳುಗಿ ಯುವಕ ಮೃತ್ಯು

- Advertisement -
- Advertisement -

ಬೆಳ್ತಂಗಡಿ : ನದಿಯಲ್ಲಿ ಈಜಲು ಹೋದ ಯುವಕನೋರ್ವ ಅಕಸ್ಮಿಕವಾಗಿ ನೀರಿನ ಸೆಳೆತಕ್ಕೆ ಸಿಲುಕಿ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಇಂದು ಸಂಜೆ ನಡೆದಿದೆ.ಕುವೆಟ್ಟು ಗ್ರಾಮದ ಸುನ್ನತ್‌ರೆ ನಿವಾಸಿ ಇರ್ಫಾನ್ (19) ಮೃತ ಯುವಕ ಎಂದು ಗುರುತಿಸಲಾಗಿದೆ.ಕರಂಬಾರು ಗ್ರಾಮದ ಕೇಳ್ಳರ ಮಹಾಲಿಂಗೇಶ್ವರ ದೇವಸ್ಥಾನದ ಸಮೀಪ ಇರುವ ನದಿಗೆ ಇಂದು ಸಂಜೆ 4 ಗಂಟೆಯ ಸುಮಾರಿಗೆ ಈಜಲು ಹೋಗಿದ್ದ ಇರ್ಫಾನ್ ನೀರಲ್ಲಿ ಮುಳುಗಿ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

ಈ ವೇಳೆ ಸ್ಥಳೀಯ ಯುವಕರು ನೀರಿನಲ್ಲಿ ಮುಳುಗಿದ್ದ ಇರ್ಫಾನ್ ನನ್ನು ರಕ್ಷಿಸಿ ಉಜಿರೆಯ ಖಾಸಗಿ ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.ಘಟನಾ ಸ್ಥಳಕ್ಕೆ ವೇಣೂರು ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ.

- Advertisement -

Related news

error: Content is protected !!