- Advertisement -
- Advertisement -



ಬಾಲಿವುಡ್ ಬೆಡಗಿ ದೀಪಿಕಾ ಪಡುಕೋಣೆ ಇಂದು (ಸೆ.8) ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಈ ಮೂಲಕ ಫ್ಯಾನ್ಸ್‌ಗೆ ನಟಿ ಗುಡ್ ನ್ಯೂಸ್ ಕೊಟ್ಟಿದ್ದಾರೆ. ರಣ್‌ವೀರ್ ಸಿಂಗ್ ತಂದೆಯಾದ ಸಂಭ್ರಮದಲ್ಲಿದ್ದಾರೆ. ಅವರು ನಿನ್ನೆ ಸಂಜೆ ಮುಂಬೈನ ರಿಲಯನ್ಸ್ ಫೌಂಡೇಶನ್ನ ಆಸ್ಪತ್ರೆಗೆ ದಾಖಲಾಗಿದ್ದರು.
ದೀಪಿಕಾ ಪಡುಕೋಣೆ ‘ಕಲ್ಕಿ’ ಸಿನಿಮಾದಲ್ಲಿ ನಟಿಸುವ ಸಂದರ್ಭದಲ್ಲಿ ತಾವು ಗರ್ಭಿಣಿ ಆಗಿರುವ ವಿಷಯ ಬಹಿರಂಗಪಡಿಸಿದ್ದರು. ಗರ್ಭಿಣಿ ಆಗಿರುವ ಸಂದರ್ಭದಲ್ಲಿಯೇ ಅವರು ‘ಕಲ್ಕಿ 2898’ ಸಿನಿಮಾದಲ್ಲಿ ನಟಿಸಿದ್ದರು. ಆದರೆ ಅದಾದ ಬಳಿಕ ಅವರು ಯಾವುದೇ ಸಿನಿಮಾಗಳಲ್ಲಿ ನಟಿಸಲಿಲ್ಲ. ರಣ್‌ವೀರ್ ಸಿಂಗ್ ಸಹ ದೀಪಿಕಾ ಗರ್ಭಿಣಿ ಆದ ಬಳಿಕ ಸಿನಿಮಾಗಳಲ್ಲಿ ನಟಿಸುವುದನ್ನು ಕಡಿಮೆ ಮಾಡಿ ಪತ್ನಿಯೊಟ್ಟಿಗೆ ಹೆಚ್ಚು ಸಮಯ ಕಳೆಯಲು ತೊಡಗಿದರು.
- Advertisement -