Thursday, March 28, 2024
spot_imgspot_img
spot_imgspot_img

ಪದವಿ ಕಾಲೇಜುಗಳ ಆರಂಭಕ್ಕೆ ಸಿದ್ಧತೆ-ನವೆಂಬರ್ 11ರ ವರೆಗೆ ಉಪನ್ಯಾಸಕರಿಗೆ ವರ್ಕ್ ಫ್ರಮ್ ಹೋಮ್!!

- Advertisement -G L Acharya panikkar
- Advertisement -

ಬೆಂಗಳೂರು(ನ.5): ಕೊರೊನಾ ವೈರಸ್ ಸೋಂಕಿನ ನಡುವಲ್ಲೇ ರಾಜ್ಯ ಸರಕಾರ ರಾಜ್ಯದಲ್ಲಿ ಪದವಿ ಕಾಲೇಜುಗಳ ಆರಂಭಿಸಲು ಸಿದ್ದತೆ ನಡೆಸುತ್ತಿದೆ. ಇದರ ನಡುವಲ್ಲೇ ಪದವಿ ಕಾಲೇಜುಗಳ ಉಪನ್ಯಾಸಕರಿಗೆ ನವೆಂಬರ್ 11ರ ವರೆಗೆ ಮನೆಯಿಂದಲೇ ಕರ್ತವ್ಯ ನಿರ್ವಹಣೆ ಮಾಡುವಂತೆ ಆದೇಶ ಹೊರಡಿಸಿದೆ.

2020/21ನೇ ಸಾಲಿನ ಶೈಕ್ಷಣಿಕ ವರ್ಷದ ತರಗತಿಗಳ ಪ್ರಾರಂಭಕ್ಕೆ ಆಗತ್ಯವಿರುವ ಪೂರ್ವ ಸಿದ್ಧತೆಗಳಾಗಿ ಡಿಜಿಟಲ್ ಲರ್ನಿಂಗ್, ಆನ್ಲೈನ್/ ಆಫ್ಲೈನ್ ಟೀಚಿಂಗ್, ಸ್ಟಡಿ ಮೆಟಿರಿಯಲ್ ಪ್ರಿಪರೇಷನ್, ಮುಂತಾದವುಗಳ ಬಗ್ಗೆ ತಯಾರಿ ಮಾಡಿಕೊಳ್ಳಲು, ಇಲಾಖಾ ವ್ಯಾಪ್ತಿಯ ಸರ್ಕಾರಿ ಮತ್ತು ಖಾಸಗಿ ಅನುದಾನಿತ ಕಾಲೇಜುಗಳ/ ಎಲ್ಲಾ ವಿಶ್ವವಿದ್ಯಾಲಯಗಳ ಬೋಧಕರಿಗೆ ದಿನಾಂಕ 4.11.2020 ರಿಂದ ದಿನಾಂಕ 11.11.2020ರವರೆಗೆ ಮನೆಯಿಂದಲೇ ಕಾರ್ಯ ನಿರ್ವಹಿಸಲು ಅನುಮೋದನೆ ನೀಡಿದೆ.

- Advertisement -

Related news

error: Content is protected !!