Monday, May 6, 2024
spot_imgspot_img
spot_imgspot_img

ಸ್ನೇಹಿತನ ಅಪ್ರಾಪ್ತ ಮಗಳ ಮೇಲೆ ಅಧಿಕಾರಿಯಿಂದ ಅತ್ಯಾಚಾರ; ಔಷಧಿ ನೀಡಿ ಗರ್ಭಪಾತಕ್ಕೆ ಸಹಕರಿಸಿದ ಪತ್ನಿ

- Advertisement -G L Acharya panikkar
- Advertisement -

ದೆಹಲಿ ಸರ್ಕಾರದ ಅಧಿಕಾರಿಯೊಬ್ಬರು ತಮ್ಮ ಸ್ನೇಹಿತನ ಹದಿಹರೆಯದ ಮಗಳ ಮೇಲೆ ಹಲವು ತಿಂಗಳ ಕಾಲ ಅತ್ಯಾಚಾರ ಎಸಗಿದ ಆರೋಪ ಕೇಳಿಬಂದಿದೆ. ಈ ಹಿನ್ನೆಲೆ ಆರೋಪಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಅಲ್ಲದೆ, ಸರ್ಕಾರಿ ಅಧಿಕಾರಿಯ ಪತ್ನಿಯ ವಿರುದ್ಧವೂ ಕೇಸ್‌ ದಾಖಲಾಗಿದೆ.

ದೆಹಲಿ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ತಮ್ಮ ಸ್ನೇಹಿತನ ಹದಿಹರೆಯದ ಮಗಳ ಮೇಲೆ ಹಲವು ತಿಂಗಳುಗಳ ಕಾಲ ಅತ್ಯಾಚಾರ ಎಸಗಿದ ಆರೋಪದ ಮೇಲೆ ಇದೀಗ ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣವನ್ನು ಎದುರಿಸುತ್ತಿದ್ದಾರೆ.

ಬಾಲಕಿ 12ನೇ ತರಗತಿ ವಿದ್ಯಾರ್ಥಿನಿ ಎಂದು ತಿಳಿದುಬಂದಿದೆ. ಆಕೆ 2020ರಲ್ಲಿ ತನ್ನ ತಂದೆಯನ್ನು ಕಳೆದುಕೊಂಡಳು, ನಂತರ ಆರೋಪಿ ಅವಳನ್ನು ತನ್ನ ಮನೆಗೆ ಕರೆತಂದನು. 2020 ಮತ್ತು 2021 ರ ನಡುವೆ ಅವನು ತನ್ನ ಮೇಲೆ ಹಲವಾರು ಬಾರಿ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಇನ್ನು, ಸಂತ್ರಸ್ತ ಬಾಲಕಿ ಗರ್ಭಿಣಿಯಾದಾಗ, ಆರೋಪಿಯು ಇದನ್ನು ಹೆಂಡತಿಗೆ ಹೇಳಿದ್ದಾನೆ. ಅಧಿಕಾರಿಯ ಪತ್ನಿ ಔಷಧಿ ನೀಡಿ ಮನೆಯಲ್ಲಿಯೇ ಗರ್ಭಪಾತ ಮಾಡಿಸಿದ್ದಾರೆ ಎಂದು ಅಪ್ರಾಪ್ತ ಬಾಲಕಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾಳೆ.

2021ರಲ್ಲಿ ಬಾಲಕಿಯು ಈತನ ಮನೆಯಿಂದ ಹೊರಗೆ ಹೋಗಿ ಬೇರೆಡೆ ನೆಲೆಸಿದ್ದಾಳೆ. ಆದರೆ, ಇತ್ತೀಚೆಗೆ ಬಾಲಕಿಯು ಆಘಾತಕ್ಕೀಡಾಗುವುದು, ಮಾನಸಿಕವಾಗಿ ಖಿನ್ನತೆಗೊಳಗಾಗುವುದು ಸೇರಿ ಹಲವು ರೀತಿಯ ಸಮಸ್ಯೆ ಎದುರಿಸಿದ ಕಾರಣ ಆಕೆಯನ್ನು ಆಪ್ತ ಸಮಾಲೋಚಕರ ಬಳಿ ಕರೆದುಕೊಂಡು ಹೋಗಲಾಗಿದೆ. ಆಗ, ಆಕೆಯು ಲೈಂಗಿಕ ದೌರ್ಜನ್ಯಕ್ಕೀಡಾಗಿದ್ದಾಳೆ ಎಂಬುದು ಗೊತ್ತಾಗಿದೆ. ಬಾಲಕಿಯು ಆಗ ಅಧಿಕಾರಿಯ ದುಷ್ಕೃತ್ಯದ ಬಗ್ಗೆ ಮಾಹಿತಿ ನೀಡಿದ್ದಾಳೆ. ಪ್ರಕರಣ ಬಯಲಾಗುತ್ತಲೇ ಅಧಿಕಾರಿಯ ವಿರುದ್ಧ ಕೇಸ್‌ ದಾಖಲಾಗಿದೆ.

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಆರೋಪಿ ಅಧಿಕಾರಿಯನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ತನ್ನ ಆಶ್ರಯದಲ್ಲಿದ್ದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಮಹಿಳಾ ಮತ್ತು ಮಕ್ಕಳ ಇಲಾಖೆ ಅಧಿಕಾರಿಯನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

- Advertisement -

Related news

error: Content is protected !!